ಬೆಂಗಳೂರು: ರಾಜ್ಯಸಭಾ ಮತ್ತು ವಿಧಾನ ಪರಿಷತ್‌ಗೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ.
ರಾಜ್ಯಸಭೆಗೆ ಡಾ. ಎಂ.ನಾಗರಾಜ್ ಹಾಗೂ ವಿಧಾನ ಪರಿಷತ್‌ಗೆ ಲಿಂಗರಾಜ್ ಪಾಟೀಲ್ ಮತ್ತು ರಾಘು ಕೌಟಿಲ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಮೈಸೂರಿನವರು.
ಇತ್ತ, ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಮೈತ್ರಿಕೂಟವು 3ನೇ ಅಭ್ಯರ್ಥಿಯಾಗಿ ಗೋವಿಂದ ರಾಜು ಹೆಸರನ್ನು ಘೋಷಿಸಲಾಗಿದೆ.
