ನವದೆಹಲಿ: ತಮ್ಮ ಆಪ್ತ ಸಹಾಯಕರೊಬ್ಬರ ಮೂಲಕ ಪಕ್ಷ ಸೇರುವಂತೆ ನನ್ನನ್ನು ಬಿಜೆಪಿ ಸಂಪರ್ಕಿಸಿದೆ. ಬಿಜೆಪಿ (BJP) ಸೇರದಿದ್ದರೆ ಮುಂಬರುವ ಒಂದು ತಿಂಗಳಲ್ಲಿ ಇಡಿ (Enforcement Directorate) ನಿಮ್ಮನ್ನು ಬಂಧಿಸಲಿದೆ ಎಂದು ಬೆದರಿಸುವ ಪ್ರಯತ್ನ ಮಾಡಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ (Atishi) ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಜೈಲು ಸೇರಿದರೂ, ಆಮ್ ಆದ್ಮಿ ಪಕ್ಷವು (Aam Aadmi Party) ಇನ್ನೂ ಒಗ್ಗಟ್ಟಿನಿಂದ ಪ್ರಬಲವಾಗಿದೆ. ಆಮ್ ಆದ್ಮಿ ಪಕ್ಷ ಮತ್ತು ಅದರ ಮುಂದಿನ ಎಲ್ಲಾ ನಾಯಕರನ್ನು ಹತ್ತಿಕ್ಕಲು ಮತ್ತು ಅವರನ್ನು ತೊಡೆದುಹಾಕಲು ಬಿಜೆಪಿ ಬಯಸಿದೆ. ಲೋಕಸಭಾ ಚುನಾವಣೆಗೂ ಮುನ್ನ ನನ್ನನ್ನೂ ಸೇರಿದಂತೆ ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ರಾಘವ್ ಚಡ್ಡಾರ ಬಂಧನವಾಗಲಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಆಯುರ್ವೇದ ಉತ್ಪನ್ನ ಉತ್ತೇಜಿಸಲು ದಾರಿತಪ್ಪಿಸುವ ಜಾಹೀರಾತು ಪ್ರಸಾರ; ಬಾಬಾ ರಾಮದೇವ್ ಕ್ಷಮೆ ಒಪ್ಪದ ಸುಪ್ರೀಂ
Advertisement
Advertisement
ಒಂದೂವರೆ ವರ್ಷಗಳಿಂದ ಇಡಿ ಮತ್ತು ಸಿಬಿಐ ಬಳಿ ಇರುವ ಹೇಳಿಕೆಯ ಆಧಾರದ ಮೇಲೆ ಇಡಿ ಅಧಿಕಾರಿಗಳ ಸೋಮವಾರ ಸೌರಭ್ ಭಾರದ್ವಾಜ್ ಮತ್ತು ನನ್ನ ಹೆಸರನ್ನು ನ್ಯಾಯಾಲಯದಲ್ಲಿ ಪ್ರಸ್ತಾಪಿಸಿದ್ದಾರೆ. ಈ ಮೂಲಕ ಅವರು ಆಮ್ ಆದ್ಮಿ ಪಕ್ಷದ ಮುಂದಿನ ನಾಯಕತ್ವವನ್ನು ಜೈಲಿಗೆ ಹಾಕಲು ಯೋಜಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Advertisement
Advertisement
ಅರವಿಂದ್ ಕೇಜ್ರಿವಾಲ್ (Arvind Kejriwal) ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಇದಕ್ಕೆ ಸಂಬಂಧಿಸಿದಂತೆ ಎರಡು ಸಾಂವಿಧಾನಿಕ ಮತ್ತು ಕಾನೂನು ನಿಬಂಧನೆಗಳಿವೆ. ಪ್ರಜಾಪ್ರತಿನಿಧಿ ಕಾಯಿದೆಯು ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದರೆ ಸಾರ್ವಜನಿಕ ಪ್ರತಿನಿಧಿಯಾಗಿ ಉಳಿಯಲು ಸಾಧ್ಯವಿಲ್ಲ ಎನ್ನುತ್ತದೆ. ಅರವಿಂದ್ ಕೇಜ್ರಿವಾಲ್ ದೋಷಿ ಎಂದು ಸಾಬೀತಾಗಿಲ್ಲ. ಕೇಜ್ರಿವಾಲ್‍ಗೆ ದೆಹಲಿ ವಿಧಾನಸಭೆಯ ಅಗಾಧ ಬಹುಮತವನ್ನು ಹೊಂದಿದ್ದಾರೆ. ಆದ್ದರಿಂದ ಅವರು ರಾಜೀನಾಮೆ ನೀಡಲು ಯಾವುದೇ ಕಾರಣವಿಲ್ಲ. ಅವರೇನಾದ್ರೂ ರಾಜೀನಾಮೆ ನೀಡಿದರೆ ಅದು ವಿರೋಧ ಪಕ್ಷಗಳ ಸರ್ಕಾರಗಳನ್ನು ಉರುಳಿಸಲು ಬಿಜೆಪಿಗೆ ಅತ್ಯಂತ ಸರಳ ಮಾರ್ಗವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ಮಧ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ – ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಸುಪ್ರೀಂ ಜಾಮೀನು