ಬೆಂಗಳೂರು: ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿರುವ 10 ಜನ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನಲ್ಲಿ ಇರಿಸಲಾಗಿದ್ದು, ಅವರ ಜವಾಬ್ದಾರಿಯನ್ನು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ವಹಿಸಿಕೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಆಪರೇಷನ್ ಕಮಲಕ್ಕೆ ಒಳಗಾಗಿ ಬಂಡಾಯ ಎದ್ದಿರುವ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡುವುದಾಗಿ ಮಧ್ಯಪ್ರದೇಶ ಸಿಎಂ ಕಮಲ್‍ನಾಥ್ ಹೇಳಿದ್ದು, ಬಂಡಾಯ ಶಮನ ಮಾಡುವ ಯತ್ನ ನಡೆಸುತ್ತಿದ್ದಾರೆ. ಜೊತೆಗೆ ಬಿಜೆಪಿಯ ರೆಬೆಲ್ ಶಾಸಕರನ್ನು ಸೆಳೆಯುವ ಪ್ರಯತ್ನವನ್ನು ಕಮಲ್‍ನಾಥ್ ಸರ್ಕಾರ ಮಾಡುತ್ತಿದೆ. ಇದನ್ನೂ ಓದಿ: ಆಪರೇಷನ್ ಮಧ್ಯಪ್ರದೇಶಕ್ಕೆ ಕರ್ನಾಟಕವೇ ಹೆಡ್ ಆಫೀಸ್
Advertisement
Advertisement
ಬೆಂಗಳೂರಿನ ಸರ್ಜಾಪುರ ರಸ್ತೆಯ ಓಕ್‍ವುಡ್ ಹೋಟೆಲ್‍ನಲ್ಲಿ ಮಧ್ಯಪ್ರದೇಶದ ಸುಮಾರು 10 ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಇರಿಸಿದೆ ಎಂದು ಹೇಳಲಾಗುತ್ತಿದೆ. ಇವರ ಜವಾಬ್ದಾರಿಯನ್ನು ಅರವಿಂದ ಲಿಂಬಾವಳಿ ವಹಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಕಾಂಗ್ರೆಸ್‍ನ ದಿನೇಶ್ ಗುಂಡೂರಾವ್ ಅವರು ಮಾತ್ರ ಬೆಂಗಳೂರಿಗೆ ಬಂದಿದ್ದ ಶಾಸಕರು ಭೋಪಾಲ್‍ಗೆ ವಾಪಸ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಮಧ್ಯಪ್ರದೇಶದ ಕಾಂಗ್ರೆಸ್‍ನ ರೆಬಲ್ ಶಾಸಕ ಹರ್ದೀಪ್ ಸಿಂಗ್ ನಿನ್ನೆಯಷ್ಟೇ ಪತ್ರದ ಮೂಲಕ ಸ್ಪೀಕರ್ ಪ್ರಜಾಪತಿ ಅವರಿಗೆ ಪತ್ರದ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. ‘ಎರಡನೇ ಬಾರಿ ಜನರಿಂದ ಆಯ್ಕೆಯಾದರೂ ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ. ಪ್ರತಿಯೊಬ್ಬ ಸಚಿವರೂ ತಾವು ಭ್ರಷ್ಟಾಚಾರದ ಭಾಗವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಹರ್ದೀಪ್ ಸಿಂಗ್ ಪತ್ರದಲ್ಲಿ ತಿಳಿಸಿದ್ದರು.