ನವದೆಹಲಿ: ಬಿಜೆಪಿಯ ಭೀಷ್ಮನೆಂದೇ ಕರೆಯುವ ಎಲ್.ಕೆ.ಅಡ್ವಾಣಿಯವರು ತಮ್ಮ ನೆಚ್ಚಿನ ಶಿಷ್ಯ ಅನಂತಕುಮಾರ್ ರವರ ಅಕಾಲಿಕ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಕೇಂದ್ರ ಸಚಿವ ಅನಂತಕುಮಾರ್ ರವರ ಅಕಾಲಿಕ ಸಾವಿನ ಸುದ್ದಿ ಕೇಳಿ ನನಗೆ ತುಂಬಾ ಆಘಾತವಾಗಿದೆ. ಅವರು ಬಡವರ ಮತ್ತು ಕೆಳವರ್ಗದ ನಾಯಕರೆಂದು ಹೆಚ್ಚು ಪ್ರಸಿದ್ಧರಾಗಿದ್ದರು. ಅನಂತಕುಮಾರ್ ಸಾವು ನಮಗೆ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
Advertisement
I'm extremely shocked and saddened by the untimely demise of Union Minister #AnanthKumar. Ananth Kumar was a very popular, dynamic leader of the poor & downtrodden. May the departed soul rest in peace: Lal Krishna Advani. (File pic) pic.twitter.com/R8h4xA7bgj
— ANI (@ANI) November 12, 2018
Advertisement
ಅನಂತಕುಮಾರ್ ಅವರು ಅಡ್ವಾಣಿ ಶಿಷ್ಯರೆಂದೇ ಹೆಸರು ಪಡೆದುಕೊಂಡಿದ್ದರು. ಅಲ್ಲದೇ ಎಲ್ಲರೂ ಅವರನ್ನು ಅಡ್ವಾಣಿಯವರ ಮನೆ ಮಗನೆಂದೂ ಕರೆಯುತ್ತಿದ್ದರು. ಆಡ್ವಾಣಿ ಅವರ ರಥಯಾತ್ರೆಯ ಸಮಯದಲ್ಲಿ ಕರ್ನಾಟಕದಲ್ಲಿ ಹೆಚ್ಚು ಅನಂತ್ ಕುಮಾರ್ ಸಂಚರಿಸಿದ್ದರು.
Advertisement
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Advertisement
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ ಅವರಿಗೆ 59 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ತೀವ್ರ ಅನಾರೋಗ್ಯ ಪೀಡಿತರಾಗಿದ್ದ ಅವರನ್ನು ಕಳೆದ ಎರಡು ದಿನಗಳಿಂದ ಬೆಂಗಳೂರಿನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಂತ್ ಕುಮಾರ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews