ಮಂಗಳೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಇಂದು ಪ್ರವೀಣ್ ಅವರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಪ್ರವೀಣ್ ಈ ಭಾಗದಲ್ಲಿ ಬೆಳೆಯುತ್ತಿದ್ದ ನಾಯಕ. ಪ್ರವೀಣ್‍ನನ್ನು ಕಳೆದುಕೊಂಡದ್ದು ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಲ್ಲರ ಗಮನ ಸೆಳೆದ ಗುಹೆಗಳ ಮಾದರಿ ಅಂಗನವಾಡಿ ವಿನ್ಯಾಸ
Advertisement
Advertisement
ಈ ರೀತಿಯ ಸಾವು ಮರುಕಳಿಸದಂತೆ ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ. ಯುವ ಮೋರ್ಚಾ 15 ಲಕ್ಷ ರೂ. ನೀಡುತ್ತದೆ. ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ. ಪಕ್ಷ 25 ಲಕ್ಷ ರೂ. ನೀಡಿದೆ. ಸಮಸ್ತ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು. ಇಸ್ಲಾಮೀ ಜಿಹಾದ್‍ನ್ನು ಮೂಲದಿಂದ ಉಚ್ಚಾಟನೆ ಮಾಡೋದಕ್ಕೆ ನಾವು ಬದ್ಧ ಎಂದು ಭರವಸೆ ಕೊಟ್ಟರು.
Advertisement
Advertisement
ಪ್ರವೀಣ್ ಸಾವು ಆಗಬಾರದಿತ್ತು. ಪ್ರತಿ ಬಾರಿ ಕಾರ್ಯಕರ್ತರನ್ನು ಬೀಳ್ಕೊಟ್ಟಾಗಲೂ ಈ ಮಾತು ಹೇಳುತ್ತೇವೆ. ಈ ಬಾರಿ ಇಡೀ ರಾಜ್ಯ, ದೇಶ ಎಚ್ಚೆತ್ತಿದೆ. ಈಗಾಗಲೇ ಇಬ್ಬರ ಬಂಧನವಾಗಿದೆ. ಪ್ರವೀಣ್ ಅವರ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯ ಮಗನೇ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಇದು ಅತ್ಯಂತ ಬೇಸರ ಸಂಗತಿಯಾಗಿದೆ ಎಂದರು. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್ ಅರೆಸ್ಟ್
ಜಿಹಾದಿ ಮನಸ್ಥಿತಿ ಯಾವ ಮಟ್ಟದಲ್ಲಿದೆ ಅನ್ನೋದು ಗೊತ್ತಾಗುತ್ತೆ. ಬಿಜೆಪಿಯ ಕಾರ್ಯಕರ್ತರು ಧೃತಿಗೆಡಬೇಡಿ. ನಾರಾಯಣ ಗುರು, ಶಿವಾಜಿಯ ಕ್ಷಾತ್ರ ರಕ್ತ ನಮ್ಮಲ್ಲಿದೆ. ಬಿಜೆಪಿ ಕಾರ್ಯಕರ್ತರ ಸಿಟ್ಟು ಕಾಂಗ್ರೆಸ್, ಜೆಡಿಎಸ್‍ಗೆ ಲಾಭವಾಗುತ್ತೆ ಎಂದು ಕೆಕೇ ಹಾಕುತ್ತಿದ್ದಾರೆ. ನಮ್ಮ ಕಾರ್ಯಕರ್ತರ ರೋಷದಿಂದ ನಮಗೆ ನಷ್ಟವಾಗಲ್ಲ. ನಮ್ಮ ಕಾರ್ಯಕರ್ತರು ಸಿದ್ಧಾಂತ ಬಿಡೋದಿಲ್ಲ ನಮ್ಮ ನಿಷ್ಟೆ ಪ್ರಶ್ನಾತೀತವಾಗಿದೆ. ಸರ್ಕಾರ ಎಲ್ಲ ರೀತಿಯ ಕ್ರಮಕೈಗೊಳ್ಳುತ್ತೆ. ಮೂಲಭೂತವಾದಿ ಸಿದ್ಧಾಂತದ ವಿರುದ್ಧ ಎಚ್ಚೆತ್ತು ಕೆಲಸ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ