ಮೈಸೂರು: ಹನುಮ ಜಯಂತಿ ಮೆರವಣಿಗೆಗೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಭಾನುವಾತರದಂದು ಕಲ್ಲು ತೂರಾಟ ನಡೆದಿದ್ದ ಹುಣಸೂರು ಪಟ್ಟಣದಲ್ಲಿ ಇಂದು ಬಂದ್ ಆಚರಿಸಲಾಗ್ತಿದೆ.
ಹುಣಸೂರು ಬಂದ್‍ಗೆ ಬಿಜೆಪಿ ನಾಯಕರು ಕರೆ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ಕೇಸರಿ ಪಡೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದೆ. ರಾತ್ರಿ ಬೇಲ್ ಮೇಲೆ ರಿಲೀಸ್ ಆದ ಸಂಸದ ಪ್ರತಾಪ ಸಿಂಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
- Advertisement -
- Advertisement -
ಹುಣಸೂರು ಪಟ್ಟಣ ಬೆಳಗ್ಗೆಯಿಂದಲೇ ಬಿಕೋ ಎನ್ನುತ್ತಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಸರ್ಕಾರಿ ಬಸ್‍ಗಳು ಕೂಡ ರಸ್ತೆಗೆ ಇಳಿದಿಲ್ಲ. ಮುಂಜಾಗ್ರತಾ ಕ್ರಮವಾಗಿ ಹುಣಸೂರಿನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮೈಸೂರು ಜಿಲ್ಲಾಡಳಿತ ಹುಣಸೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ.
- Advertisement -
- Advertisement -
ಹುಣಸೂರಿನಲ್ಲಿ ಶಾಲಾ ಕಾಲೇಜುಗಳಿಗೆ ನಿನ್ನೆಯೇ ರಜೆ ಘೋಷಣೆ ಮಾಡಲಾಗಿದೆ.