ಬೆಂಗಳೂರು: ಚುನಾವಣೆಗೂ ಮುನ್ನ ಸಾಲ ಮನ್ನಾ ಮಾಡ್ತೀನಿ ಅಂದಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಯೂ ಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿ ಇವತ್ತು ಕರ್ನಾಟ ಬಂದ್‍ಗೆ ಕರೆ ಕೊಟ್ಟಿದೆ. ಆದ್ರೆ ಬಿಜೆಪಿ ಕರೆ ಕೊಟ್ಟ ಇವತ್ತಿನ ಬಂದ್ ಯಶಸ್ವಿಯಾಗೋದು ಅನುಮಾನ.
ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಬಿಜೆಪಿ ಕರೆ ನೀಡಿರುವ ಬಂದ್‍ಗೆ ಬೆಂಬಲ ವ್ಯಕ್ತವಾಗಿಲ್ಲ. ಕೆಲವೇ ಕೆಲವು ಜಿಲ್ಲೆಗಳಲ್ಲಿ ಬಂದ್‍ಗೆ ಬೆಂಬಲ ವ್ಯಕ್ತವಾಗಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ್ದ, ದಕ್ಷಿಣ ಕನ್ನಡದಲ್ಲೇ ಬಂದ್‍ಗೆ ಬೆಂಬಲ ದೊರೆತಿಲ್ಲ.
Advertisement
ಇತ್ತ ಬೆಂಗಳೂರಿನಲ್ಲೂ ಬಂದ್ ಇರುವುದಿಲ್ಲ. ಕೆಎಸ್‍ಆರ್ ಟಿಸಿ, ಬಿಎಂಟಿಸಿ ಬಸ್‍ಗಳು ಎಂದಿನಂತೆ ಸಂಚರಿಸಲಿವೆ. ಹೋಟೆಲ್‍ಗಳು, ಮಾಲ್‍ಗಳು, ಸಿನಿಮಾ ಪ್ರದರ್ಶನ ಎಂದಿನಂತೆ ಇರಲಿದೆ. ಇನ್ನು ರಾಜ್ಯಾದ್ಯಂತ ಯಾವುದೇ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಹೀಗಾಗಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೆ ಬಂದ್ ಮಾಡುವ, ಪ್ರತಿಭಟನೆ ಮಾಡುವ ರೈತ ಸಂಘಟನೆಗಳಿಗೆ ಬೆಂಬಲ ನೀಡೋದಾಗಿ ತಿಳಿಸಿದೆ.