– ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ದೋಸ್ತಿಗಳು ಸಜ್ಜು
ಬೆಂಗಳೂರು: ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಂಡಿಸಿದ ಹಿನ್ನೆಲೆ ಸಿಡಿದೆದ್ದ ಬಿಜೆಪಿಗರು (BJP) ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ (ಫೆ.23) ರಾಜ್ಯವ್ಯಾಪಿ ಪ್ರತಿಭಟನೆಗೆ (Protest) ಕರೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಸದನದಲ್ಲಿ ಸ್ಪೀಕರ್ (UT Khader) ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಹಾಗೂ ಜೆಡಿಎಸ್ (JDS) ಪಕ್ಷದ ನಾಯಕರು ಶುಕ್ರವಾರ ರಾಜಭವನಕ್ಕೆ ತೆರಳಲು ನಿರ್ಧರಿಸಿದ್ದಾರೆ. ಅಲ್ಲದೇ ಸ್ಪೀಕರ್ ವಿರುದ್ಧ ದೋಸ್ತಿ ಪಕ್ಷಗಳು ರಾಜ್ಯಪಾಲರಿಗೆ ದೂರು ನೀಡಲಿದ್ದಾರೆ. ಈ ಕುರಿತು ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಸರ್ಕಾರ ಮತ್ತು ಸ್ಪೀಕರ್ ವಿರುದ್ಧ ಆರ್.ಅಶೋಕ್ (R Ashok) ಹಾಗೂ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ
ಕೇಂದ್ರದ ವಿರುದ್ಧ ನಿರ್ಣಯ ಮಂಡಿಸಿದ ಕುರಿತು ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಇಂದು ಕರಾಳ ದಿನ. ಬಿಎಸಿ ಸಭೆಯಲ್ಲಿ ಬಿಲ್ ಬಗ್ಗೆ ಮಾತ್ರ ಹೇಳಿದ್ದಾರೆ. ಇವತ್ತು ಏಕಾಏಕಿ ಕಳ್ಳನ ರೀತಿ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಾಡಿದ್ದಾರೆ. ಮುನ್ಸೂಚನೆ ನೀಡದೇ ಈ ರೀತಿ ಮಾಡಿದ್ದಾರೆ. ಕಳ್ಳರ ರೀತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ದೂರುವ ಹಳೇ ಚಾಳಿ ಮುಂದುವರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸೋಲಿನ ಭೀತಿಯಿಂದ ಈ ರೀತಿ ಮಾಡಿದ್ದಾರೆ. ರಾಜಾರೋಷವಾಗಿ ತನ್ನಿ ಚರ್ಚೆ ಮಾಡುತ್ತೇವೆ. ಆದರೆ ಮೋಸದಿಂದ ಇವತ್ತು ನಿರ್ಣಯ ಮಂಡಿಸಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 6,200 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗೆ ನಿತಿನ್ ಗಡ್ಕರಿ ಶಂಕುಸ್ಥಾಪನೆ
ಇನ್ನೂ ರಾಜ್ಯ ಸರ್ಕಾರದ ನಿರ್ಣಯ ಕುರಿತು ಮಾತನಾಡಿದ ವಿಜಯೇಂದ್ರ, ಕೇಂದ್ರದ ಮೇಲೆ ಗೂಬೆ ಕೂರಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲಿದೆ. ಸರ್ಕಾರದ ನಡೆಯನ್ನು ಬಲವಾಗಿ ಖಂಡಿಸುತ್ತೇವೆ. ಶುಕ್ರವಾರ ರಾಜ್ಯಪಾಲರಿಗೂ ದೂರು ಕೊಡುತ್ತೇವೆ. ನಾವು ಇದನ್ನು ನೋಡಿಕೊಂಡು ಕಣ್ಮುಚ್ಚಿ ಕೂರಲ್ಲ. ಚುನಾವಣಾ ಸೋಲಿನ ಭಯದಿಂದ ಸದನದ ನೀತಿ, ಕಾನೂನು ಮೀರಿ ನಡೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಹಣೆಬರಹ ಗೊತ್ತಾಗಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಕಡ್ಡಾಯಕ್ಕೂ ಕ್ಯಾತೆ – ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ತೀರ್ಮಾನ
ಲೋಕಸಭೆ ಚುನಾವಣೆ ಸನಿಹದಲ್ಲಿರುವಾಗ ರಾಜ್ಯದಲ್ಲಿ ಧರ್ಮ ದಂಗಲ್ ತೀವ್ರಗೊಂಡಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕಕ್ಕೆ ನಿನ್ನೆಯಷ್ಟೇ ವಿಧಾನಸಭೆ ಅನುಮೋದನೆ ನೀಡಿತ್ತು. ಈ ಸಂದರ್ಭದಲ್ಲಿ ಸುಮ್ಮನೆ ಇದ್ದ ಬಿಜೆಪಿಗರು ಇವತ್ತು ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ಅಂದು ಘಜ್ನಿ ದೇವಸ್ಥಾನಗಳನ್ನು ನಿರಂತರವಾಗಿ ಲೂಟಿ ಮಾಡಿದ್ದ. ಇಂದು ಸಿದ್ದರಾಮಯ್ಯ ಸರ್ಕಾರ ದೇವಾಲಯಗಳ ಲೂಟಿಗಿಳಿದು ತಮ್ಮ ಕುರ್ಚಿಯನ್ನು ಭದ್ರ ಮಾಡಿಕೊಳ್ಳಲು ನೋಡುತ್ತಿದೆ. ಭಕ್ತರ ಕಾಣಿಕೆ ಹುಂಡಿಗೆ ಕನ್ನ ಹಾಕಿದ ಕಾಂಗ್ರೆಸ್ ಸರ್ಕಾರ ಶಾಪಗ್ರಸ್ಥವಾಗುವುದು ನಿಶ್ಚಿತ. ಹಿಂದೂಗಳಿಗೆ ದ್ರೋಹ ಬಗೆಯಲು ಸದಾ ಸಿದ್ದ ಸರ್ಕಾರ. ಉಂಡು ಹೋದ- ಹುಂಡಿ ಕೊಂಡು ಹೋದ ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿದ್ದು, #ಅವರ್‌ಟೆಂಪಲ್‌ಅವರ್‌ರೈಟ್ #ಹಿಂದುವಿರೋಧಿಕಾಂಗ್ರೆಸ್ ಎಂಬ ಹ್ಯಾಷ್ ಟ್ಯಾಗ್ ಹಾಕಿದೆ. ಇದನ್ನೂ ಓದಿ: ಕೇಂದ್ರದ ವಿರುದ್ಧ ನಿರ್ಣಯ ಅಂಗೀಕಾರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ – ಸದನ ಅಲ್ಲೋಲ ಕಲ್ಲೋಲ!
ಇನ್ನು, ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಶ್ರೀಮಂತ ದೇವಾಲಯಗಳಿಗೆ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ಹೀಗೆ ಕನ್ನ ಹಾಕುವ ಬದಲು ವಿಧಾನಸೌಧಧ ಮುಂದೆ ಒಂದು ಹುಂಡಿ ಇಟ್ಟುಬಿಡಲಿ. ದಾನಿಗಳು ಅಲ್ಲಿಗೆ ಬಂದು ದಾನ ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. ಇನ್ನು, #ನೋಹುಂಡಿಕಾಣಿಕೆ ಎಂಬ ಹ್ಯಾಷ್‌ಟ್ಯಾಗ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ಮುಜರಾಯಿ ವ್ಯಾಪ್ತಿಯ ದೇಗುಲಗಳಿಗೆ ಹುಂಡಿ ದುಡ್ಡನ್ನು ಹಾಕಬೇಡಿ. ಇದರ ಬದಲು ಬಡವರಿಗೆ, ಗೋಶಾಲೆಗಳಿಗೆ ಹಣವನ್ನು ನೀಡಿ. ಹುಂಡಿಗೆ ದುಡ್ಡು ನೀಡಿದರೆ ಅದನ್ನು ಸರ್ಕಾರ ಬಳಸಿಕೊಳ್ಳುತ್ತದೆ ಎಂದು ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಇದನ್ನೂ ಓದಿ: ಚುನಾವಣೆ ಸ್ಪರ್ಧೆ ಕಾರಣಕ್ಕೆ ಪಕ್ಷಾಂತರ ಮಾಡಿರೋದು ಬೇಸರವಾಗಿದೆ: ಮುದ್ದಹನುಮೇಗೌಡ