ಬೆಂಗಳೂರು: ನರೇಂದ್ರ ಮೋದಿಜೀ ಅವರ ಜನಪ್ರಿಯತೆಯನ್ನು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದವರಿಗೆ ಸಹಿಸಲು ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಟೀಕಿಸಿದರು. ಇಂಥ ದೇಶವಿರೋಧಿ ಶಕ್ತಿಗಳ ವಿರುದ್ಧ ನಾವು ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.
‘ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ’ ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರು ಹೊರಟಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಖಾಲಿ ಮಾತನಾಡುವ ಗಿರಾಕಿ ಅಲ್ಲ, ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ: ಡಿಕೆಶಿ
ಕೇಂದ್ರ ಸರ್ಕಾರ ಬುಡಮೇಲು ಮಾಡಲು ಇವರು ಹೊರಟಿದ್ದಾರೆ. ದೆಹಲಿಯಲ್ಲಿ ಪ್ರತಿಭಟನೆ ಮಾಡಿ ಅರಾಜಕತೆ ಸೃಷ್ಟಿಸುವ ಯತ್ನ ನಡೆದಿದೆ. ಬಾಂಗ್ಲಾ, ಶ್ರೀಲಂಕಾ, ನೇಪಾಳ, ಫ್ರಾನ್ಸ್ನಲ್ಲಿ ಅರಾಜಕತೆ ಸೃಷ್ಟಿಸಲು ಇವರು ಯತ್ನಿಸಿದ್ದರು ಎಂದು ದೂರಿದರು.
ದೇಶದಲ್ಲಿ ಹಲವು ಬಾರಿ ಎಸ್ಐಆರ್ ನಡೆದಿದೆ. ಕಾಂಗ್ರೆಸ್ಸಿನವರಿಗೆ ಎಸ್ಐಆರ್, ಇವಿಎಂ ಕುರಿತು ವಿಶ್ವಾಸವಿಲ್ಲ. ಇವರಿಗೆ ಸುಪ್ರೀಂ ಕೋರ್ಟ್ ಬಗ್ಗೆಯೂ ವಿಶ್ವಾಸವಿಲ್ಲ ಎಂದು ಟೀಕಿಸಿದರು. ನಾಳೆ ಚಿತ್ರದುರ್ಗದಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಹಿರಿಯೂರು ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಲ್ಲಿಸುವ ಅಭಿಪ್ರಾಯ ಇದೆ: ಕುಮಾರಸ್ವಾಮಿ
