ಹಾವೇರಿ:ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹಾವೇರಿ (Haveri) ಲೋಕಸಭಾ ಕ್ಷೇತ್ರದಿಂದ 43,513 ಮತಗಳಿಂದ ಜಯಗಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ (Anandswami) 6,62,025 ಮತಗಳನ್ನು ಪಡೆದರೆ ಬೊಮ್ಮಾಯಿ 7,05,538 ಮತಗಳನ್ನು ಪಡೆದು ಗೆದ್ದಿದ್ದಾರೆ.
2019ರ ಚುನಾವಣೆಯಲ್ಲಿ ಶಿವಕುಮಾರ್ ಉದಾಸಿ ಅವರು ಬಿಜೆಪಿಯಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಈ ಬಾರಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿತ್ತು. ಇದನ್ನೂ ಓದಿ: ಮೈತ್ರಿ ಅಭ್ಯರ್ಥಿ ಎಂದಲ್ಲ, ಜೆಡಿಎಸ್ ಅಭ್ಯರ್ಥಿ ಎಂದು ಭಾವಿಸಿ ಮತ ನೀಡಿದ್ದಾರೆ: ಕೆ.ಸುಧಾಕರ್
ಕಳೆದ ಚುನಾವಣೆಯಲ್ಲಿ ಬಿಜೆಪಿ 6,83,660 ಮತಗಳನ್ನು ಪಡೆದಿದ್ದರೆ ಡಿಆರ್ ಪಾಟೀಲ್ ಅವರು 5,42,778 ಮತಗಳನ್ನು ಪಡೆದಿದ್ದರು.
ಬೊಮ್ಮಾಯಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.