ವರುಣಾದಲ್ಲಿ ಸೋಮಣ್ಣ Vs ಸಿದ್ದರಾಮಯ್ಯ – ಚಾಮರಾಜನಗರದಿಂದಲೂ ಟಿಕೆಟ್‌

Public TV
1 Min Read
V Somanna

ನವದೆಹಲಿ/ಮೈಸೂರು: ವಸತಿ ಸಚಿವ ವಿ. ಸೋಮಣ್ಣ (V Somanna) ಅವರಿಗೆ ಮೈಸೂರು ಜಿಲ್ಲೆಯ ವರುಣಾ ಹಾಗೂ ಚಾಮರಾಜನಗರ ಜಿಲ್ಲೆ ಎರಡೂ ಕ್ಷೇತ್ರಗಳಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಹಾಗಾಗಿ ವರುಣಾ ಕ್ಷೇತ್ರದಲ್ಲಿ (Varuna Constituency) ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಿ. ಸೋಮಣ್ಣ ಕಣಕ್ಕಿಳಿಯಲಿದ್ದಾರೆ.

VIJAYENDRA 3

ಈ ಬಾರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಬಲ ಪ್ರತಿಸ್ಪರ್ಧಿಯಾಗಿ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa) ಪುತ್ರ ಬಿ.ವೈ ವಿಜಯೇಂದ್ರ ಅವರನ್ನ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ಪ್ಲಾನ್‌ ಮಾಡಿತ್ತು. ಆದರೆ, ಬಿ.ಎಸ್‌ ಯಡಿಯೂರಪ್ಪ ಅವರು ವಿಜಯೇಂದ್ರ (BY Vijayendra)) ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಖಚಿತಪಡಿಸಿದ್ದರು. ನಂತರ ಪ್ರಬಲ ಎದುರಾಳಿಯನ್ನ ಕಣಕ್ಕಿಳಿಸಲು ಪ್ಲಾನ್‌ ಮಾಡಿದ್ದ ಬಿಜೆಪಿ ಹೈಕಮಾಂಡ್‌ ವಿ. ಸೋಮಣ್ಣ ಅವರನ್ನ ಆಯ್ಕೆ ಮಾಡಿದೆ.

bjp flag

ವಿ. ಸೋಮಣ್ಣ ಅವರು ಪ್ರಸ್ತುತ ಪ್ರತಿನಿಧಿಸಿರುವ ಗೋವಿಂದರಾಜನಗರ ಕ್ಷೇತ್ರ ಹಾಗೂ ಚಾಮರಾಜನಗರದಿಂದ (Chamarajanagar) ಟಿಕೆಟ್‌ ಕೇಳಿದ್ದರು. ಆದರೆ ಸೋಮಣ್ಣ ಬಯಸಿದಂತೆ ಚಾಮರಾಜನಗರದಿಂದ ಟಿಕೆಟ್‌ ನೀಡಿದ್ದು, ಗೋವಿಂದರಾಜನಗರಕ್ಕೆ ಬದಲಾಗಿ ವರುಣಾ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಬಿ.ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಶಿಕಾರಿಪುರದಿಂದಲೇ ಟಿಕೆಟ್‌ ನೀಡಲಾಗಿದೆ.

Share This Article