ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕ್ರಿಕೆಟಿಗ ಗೌತಮ್ ಗಂಭೀರ್ ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಅನುಮತಿ ಪಡೆಯದೆ ಎರಡು ಕಡೆ ರ್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಎಫ್‍ಐಆರ್ ದಾಖಲಿಸುವಂತೆ ಆದೇಶಿಸಿದ್ದಾರೆ. ಚುನಾವಣಾ ಅಧಿಕಾರಿಗಳ ಆದೇಶದ ಮೇರೆಗೆ ದೆಹಲಿ ಪೊಲೀಸರು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
Advertisement
Advertisement
ಇದಕ್ಕೂ ಮೊದಲು ಗೌತಮ್ ಗಂಭೀರ್ ವಿರುದ್ಧ ಪೂರ್ವ ದೆಹಲಿಯ ಆಪ್ ಅಭ್ಯರ್ಥಿ ಅತಿಶಿ ಮಾರಲೇನಾ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಗಂಭೀರ್ ಎರಡು ಸ್ಥಳಗಳಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಕ್ಷನ್ 155(2) ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಬೇಕೆಂದು ಅತಿಶಿ, ಕೋರ್ಟ್ ಮೊರೆ ಹೋಗಿದ್ದರು.