ಕಲಬುರಗಿ: ಜಿಲ್ಲೆಯ ಹೊರವಲಯದಲ್ಲಿ ಗುರುವಾರ ಸಾರಿಗೆ ಸಂಸ್ಥೆಯ ಎರಡು ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ತಡರಾತ್ರಿ 11.30ಕ್ಕೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಉಮೇಶ್ ಜಾಧವ್ ತಡರಾತ್ರಿ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು, ಅಪಘಾತದಲ್ಲಿ ಗಾಯಗೊಂಡವರನ್ನು ಮಾತನಾಡಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿದ್ದ ಜಾಧವ್ ಅವರೇ ಗಾಯಾಳುಗಳ ಆರೋಗ್ಯ ಪರಿಶೀಲನೆ ಕೂಡ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Advertisement
Advertisement
ಬಸ್‍ಗಳ ನಡುವೆ ಅಪಘಾತ:
ಗುರುವಾರ ಸಾರಿಗೆ ಸಂಸ್ಥೆ ಎರಡು ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿದ್ದರು. ಗಾಣಗಾಪುರದಿಂದ ಚಿತ್ತಾಪುರಕ್ಕೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ಚಿಂಚೋಳಿಯಿಂದ ಕಲಬುರಗಿಗೆ ಬರುತ್ತಿದ್ದ ಇನ್ನೊಂದು ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿತ್ತು. ಅಪಘಾತದಿಂದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. 30ಕ್ಕೂ ಹೆಚ್ಚು ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Advertisement
ಈ ಬಗ್ಗೆ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.