ಬಿಜೆಪಿಯಿಂದ ಕಾಶ್ಮೀರದ ಸ್ಥಿತಿಯನ್ನು ನಿಭಾಯಿಸಲು ಆಗುತ್ತಿಲ್ಲ: ಕೇಜ್ರಿವಾಲ್ ವಾಗ್ದಾಳಿ

Public TV
1 Min Read
Arvind Kejriwal

ನವದೆಹಲಿ: ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆ ಕೇಂದ್ರ ಸರ್ಕಾರ ಬಲವಂತವಾಗಿ ಕಾಶ್ಮೀರಿ ಪಂಡಿತರನ್ನು ಸ್ಥಳಾಂತರಿಸುತ್ತಿದೆ. ಬಿಜೆಪಿಯಿಂದ ಕಾಶ್ಮೀರದ ಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಜನ ಆಕ್ರೋಶ ರ‍್ಯಾಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, 1990ರಲ್ಲಿ ಕಾಶ್ಮೀರಿ ಪಂಡಿತರೊಂದಿಗೆ ಏನಾಗಿತ್ತೋ ಅದು ಮತ್ತೆ ಮರುಕಳಿಸುತ್ತಿದೆ. ಇದನ್ನು ಬಿಜೆಪಿಯಿಂದ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಅವರು ಕೇವಲ ಕೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ದಯವಿಟ್ಟು ಕಾಶ್ಮೀರದ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಕೇಳಿಕೊಂಡರು. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

arvind kejriwal

ತಮ್ಮ ಮೇಲಾಗುತ್ತಿರುವ ಹಿಂಸಾಚಾರವನ್ನು ಕಾಶ್ಮೀರಿ ಪಂಡಿತರಿಂದ ಪ್ರತಿಭಟಿಸಲೂ ಸಾಧ್ಯವಾಗುತ್ತಿಲ್ಲ. ಬಿಜೆಪಿ ಅವರಿಗೆ ಪ್ರತಿಭಟಿಸಲು ಅವಕಾಶ ನೀಡದೇ ಬಂಧಿಸುತ್ತಿದೆ. ಅವರಿಗೆ ಭದ್ರತೆ ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. 1990ರಲ್ಲಿ ನಡೆದ ಘಟನೆ ಇದೀಗ ಮರುಕಳಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಸ್ಥಳಾಂತರವಾಗಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ಯಾವಾಗ್ಲೂ ತೆರೆದಿರುತ್ತದೆ: ಆದಿತ್ಯ ಠಾಕ್ರೆ

ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಬೆಂಬಲಿಸಲಾಗುತ್ತಿದೆ. ಇಂತಹ ಹೀನ ತಂತ್ರಗಳನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಹೇಳಲು ಬಯಸುತ್ತೇನೆ. ಕಾಶ್ಮೀರ ಯಾವಾಗಲೂ ಭಾರತದ ಭಾಗವಾಗಿರುತ್ತದೆ. ಕಾಶ್ಮೀರದಲ್ಲಿ ಹಿಂದೂ ಹಾಗೂ ಸ್ಥಳೀಯರಲ್ಲದವರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಉದ್ದೇಶಪೂರ್ವಕವಾಗಿ ಹತ್ಯೆ ನಡೆಸುತ್ತಿರುವುದರಿಂದ ತತ್ತರಿಸಿ ಹೋಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

Share This Article
Leave a Comment

Leave a Reply

Your email address will not be published. Required fields are marked *