ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ: ಹೆಚ್‌ಸಿ ಬಾಲಕೃಷ್ಣ

Public TV
1 Min Read
hc balakrishna

– ದ್ವೇಷದ ರಾಜಕಾರಣ ಮಾಡಿ ರಾಜ್ಯವನ್ನು ಬಾಂಗ್ಲಾ, ಶ್ರೀಲಂಕಾ ಸ್ಥಿತಿಗೆ ತರುವ ಪ್ರಯತ್ನ

ರಾಮನಗರ: ಬಿಜೆಪಿಯಿಂದ (BJP) ಸಿದ್ದರಾಮಯ್ಯರ (Siddaramaiah) ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ (HC Balakrishna) ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (MUDA Scam) ಅನುಮತಿ ನೀಡಿದ ವಿಚಾರದ ಕುರಿತು ಮಾಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ಅಂದುಕೊಂಡಿರಲಿಲ್ಲ. ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ ಸಿದ್ದರಾಮಯ್ಯ. ಅಧಿಕಾರ ಇದ್ದ ಸಂದರ್ಭದಲ್ಲಿ ಕುಟುಂಬದವರನ್ನು ಅಕ್ಕಪಕ್ಕ ಸೇರಿಸದೇ ಆಡಳಿತ ಮಾಡಿದ್ದಾರೆ. ಬಿಜೆಪಿಯವರು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಯುಪಿಯಲ್ಲಿ ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು – ತಪ್ಪಿದ ಭಾರಿ ಅನಾಹುತ

ಸಿದ್ದರಾಮಯ್ಯ ಕಾಲದಲ್ಲಿ ಆಗದೇ ಇರುವ ವಿಚಾರವನ್ನು ಅವರ ಹಣೆಗೆ ಕಟ್ಟುವ ಕೆಲಸ ಆಗುತ್ತಿದೆ. ಬಿಜೆಪಿಯವರಿಗೆ ಸಿದ್ದರಾಮಯ್ಯನ ಜನಪ್ರಿಯತೆ ಸಹಿಸಲು ಆಗುತ್ತಿಲ್ಲ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ. ಬಹುಶಃ ಇದರಿಂದ ಅವರಿಗೆ ಯಾವುದೇ ಅನುಕೂಲ ಆಗಲ್ಲ. ದ್ವೇಷದ ರಾಜಕಾರಣ ಮಾಡಿ ರಾಜ್ಯವನ್ನು ಬಾಂಗ್ಲಾ, ಶ್ರೀಲಂಕಾ ಸ್ಥಿತಿಗೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇಷ್ಟೊಂದು ದ್ವೇಷದ ರಾಜಕಾರಣ ಮಾಡಿರೋ ಉದಾಹರಣೆಯೇ ಇಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಜೆಪಿ ನಾಯಕರ ಆಗ್ರಹ

Share This Article