ಹೈಕಮಾಂಡ್ ಎದುರೇ ರಾಜ್ಯ ಬಿಜೆಪಿ ನಾಯಕರ ಅಸಮಾಧಾನ ಸ್ಫೋಟ?

Public TV
1 Min Read
BJP Meeting a

ನವದೆಹಲಿ: ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಕುರಿತಾಗಿ ದೆಹಲಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ರಾಜ್ಯ ನಾಯಕರ ಅಸಮಾಧಾನ ಸ್ಫೋಟಗೊಂಡಿದೆ. ಹಾಲಿ ಸಂಸದರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ರಾಜ್ಯ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ.

ಹೈಕಮಾಂಡ್ ಮುಂದೆ ಆಡಳಿತ ವಿರೋಧಿ ಅಲೆ ಇರುವ ಸಂಸದರಿಗೆ ಕೊಕ್ ನೀಡಬೇಕೆಂಬ ಮಾತುಗಳು ಕೇಳಿ ಬಂದಿವೆ. ಈ ವಿಚಾರವಾಗಿ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದ್ದು, ಮೈಸೂರು, ಬೀದರ್, ದ.ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು ಬಾಗಲಕೋಟೆ ವಿಷಯದಲ್ಲಿ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗುತ್ತಿದೆ. ಸ್ಥಳೀಯರ ವಿರೋಧದ ನಡುವೆ ಹಾಲಿ ಸಂಸದರಿಗೆ ಟಿಕೆಟ್ ನೀಡುವುದು ಒಳ್ಳೆಯದಲ್ಲ ಎಂಬ ವಾದವನ್ನು ಕೆಲ ಮುಖಂಡರು ಮಂಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

BJP Meeting

ಸಭೆಯಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಪಿ.ಸಿ.ಗದ್ದಿಗೌಡರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿಂತಿದ್ದಾರೆ. ಯಡಿಯೂರಪ್ಪರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪಿ.ಸಿ ಗದ್ದಿಗೌಡರ್ ಮತ್ತು ಪ್ರತಾಪ್ ಸಿಂಹ ಕಾರ್ಯಕ್ಷಮತೆಗೆ ವಿರೋಧ ವ್ಯಕ್ತವಾಗಿದೆ. ಹೀಗಾಗಿ ನಾಲ್ಕೈದು ಕ್ಷೇತ್ರಗಳ ಟಿಕೆಟ್ ಹಂಚಿಕೆಯಲ್ಲಿ ಬಿಕ್ಕಟ್ಟು ನಿರ್ಮಾಣವಾಗಿದ್ದರಿಂದ ಅಂತಿಮ ಪಟ್ಟಿ ಬಿಡುಗಡೆ ತಡವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *