ಆಗಸ್ಟ್ 8ರ ರಾಜ್ಯಸಭಾ ಚುನಾವಣೆಯಲ್ಲಿ ಗುಜರಾತ್‍ನಿಂದ ಅಮಿತ್ ಶಾ ಸ್ಪರ್ಧೆ

amith shah

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಸ್ಟ್ 8ರ ರಾಜ್ಯಸಭಾ ಚುನಾವಣೆಯಲ್ಲಿ ಗುಜರಾತ್‍ನಿಂದ ಸ್ಪರ್ಧಿಸಲಿದ್ದಾರೆ ಎಂದು ಬುಧವಾರದಂದು ಬಿಜೆಪಿ ಹೇಳಿದೆ.

ರಾಜ್ಯದಲ್ಲಿ 3 ಸ್ಥಾನಗಳಿಗೆ ಆಗಸ್ಟ್ 8ರಂದು ಚುನಾವಣೆ ನಡೆಯಲಿದ್ದು, ದೊಡ್ಡ ಬಹುಮತ ಹೊಂದಿರುವ ಬಿಜೆಪಿ ಸುಲಭವಾಗಿ ಎರಡು ಸ್ಥಾನಗಳನ್ನ ಗೆಲ್ಲಲಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಅವಧಿ ಮುಂದಿನ ತಿಂಗಳು ಅಂತ್ಯಗೊಳ್ಳಲಿದ್ದು ಎರಡನೇ ಸ್ಥಾನಕ್ಕಾಗಿ ಬಿಜೆಪಿ ಸ್ಮೃತಿ ಇರಾನಿ ಅವರನ್ನ ಮತ್ತೊಮ್ಮೆ ನಾಮನಿರ್ದೇಶನ ಮಾಡಲಿದೆ. ಅಮಿತ್ ಶಾ ಇಂದು ಗುಜರಾತ್‍ಗೆ ತೆರಳಲಿದ್ದು, ಶುಕ್ರವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ಇನ್ನೂ ಮೂರನೇ ಸ್ಥಾನಕ್ಕೆ ಅಭ್ಯರ್ಥಿಯನ್ನ ಘೋಷಿಸಿಲ್ಲ. ಮೂಲಗಳ ಪ್ರಕಾರ ಪಕ್ಷವು ಬಲ್ವಂತ್‍ಸಿಂಗ್ ರಜ್‍ಪುತ್ ಅವರಿಗೆ ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಬಲವಂತ್‍ಸಿಂಗ್ ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದು, ಪಕ್ಷ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯ ರಾಜಕೀಯ ಸಲಹೆಗಾರರಾದ ಅಹ್ಮದ್ ಪಟೇಲ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *