ಪುಣೆ: ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಗಣೇಶ ಪೆಂಡಾಲ್‍ನಲ್ಲಿ ಭಾರೀ ಪ್ರಮಾಣದ ಬೆಂಕಿ (Fire) ಕಾಣಿಸಿಕೊಂಡ ಘಟನೆ ಪುಣೆಯಲ್ಲಿ (Pune) ನಡೆದಿದೆ. ಅದೇ ವೇಳೆ ಪವಾಡದಂತೆ ಜೋರಾಗಿ ಸುರಿದ ಮಳೆಯಿಂದಾಗಿ (Rain) ಅಗ್ನಿ ದುರಂತ ತಪ್ಪಿದಂತಾಗಿದೆ.
ಪಕ್ಷದ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಚಂದ್ರಶೇಖರ್ ಬಾವಂಕುಲೆ ಅವರೊಂದಿಗೆ ನಡ್ಡಾ ಅವರು ಪ್ರಾರ್ಥನೆ ಸಲ್ಲಿಸಲು ಪುಣೆಯ ಗಣೇಶ ಪೆಂಡಾಲ್‍ಗೆ ತೆರಳಿದ್ದರು. ಈ ವೇಳೆ ಪೆಂಡಾಲ್‍ನ ಗೋಪುರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ನಡ್ಡಾ ಅವರನ್ನು ಸುರಕ್ಷಿತವಾಗಿ ಸ್ಥಳದಿಂದ ಹೊರಕ್ಕೆ ಕರೆದುಕೊಂಡು ಬಂದಿದ್ದಾರೆ. ಅದೇ ವೇಳೆ ಮಳೆ ಕೂಡ ಬಂದಿದೆ. ಇದರಿಂದ ಬಹುದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಇದನ್ನೂ ಓದಿ: ಜ.22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ: ನೃಪೇಂದ್ರ ಮಿಶ್ರಾ
Advertisement
Advertisement
ಪಟಾಕಿಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು – ಮತ್ತೆ ಇಂಟರ್‌ನೆಟ್ ಸ್ಥಗಿತ
Advertisement
Web Stories