ನವದೆಹಲಿ: ಇಂದು ಸಂಜೆ 7:15ಕ್ಕೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಪ್ರಮಾಣವಚನ ಸ್ವೀಕರಿಸಲಿದ್ದು, ಮೋದಿ ಸಂಪುಟದಲ್ಲಿ ಜೆ.ಪಿ ನಡ್ಡಾ (JP Nadda) ಅವರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.
ಜವಾಹರಲಾಲ್ ನೆಹರೂ ಬಳಿಕ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮೂವತ್ತಕ್ಕೂ ಹೆಚ್ಚು ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ನವೀನ್ ಪಟ್ನಾಯಕ್ ಆಪ್ತ ವಿ.ಕೆ.ಪಾಂಡಿಯನ್ ಸಕ್ರಿಯ ರಾಜಕಾರಣಕ್ಕೆ ವಿದಾಯ
Advertisement
Advertisement
2014 ರಿಂದ 2019ರವರೆಗಿನ ಮೋದಿಯವರ ಮೊದಲ ಕ್ಯಾಬಿನೆಟ್‌ನಲ್ಲಿ ನಡ್ಡಾ ಅವರು ಆರೋಗ್ಯ ಸಚಿವಾಲಯದ ಉಸ್ತುವಾರಿ ವಹಿಸಿದ್ದರು. 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಸೆಪ್ಟೆಂಬರ್ 2022ರಲ್ಲಿ, ಪಕ್ಷದ ಉನ್ನತ ಹುದ್ದೆಯಲ್ಲಿ ನಡ್ಡಾ ಅವರ ಅಧಿಕಾರಾವಧಿಯು ಕೊನೆಗೊಳ್ಳುವ ನಾಲ್ಕು ತಿಂಗಳ ಮೊದಲು ಅವರಿಗೆ ಈ ವರ್ಷದ ಸಾರ್ವತ್ರಿಕ ಚುನಾವಣೆಯ ಅಂತ್ಯದವರೆಗೆ ವಿಸ್ತರಣೆಯನ್ನು ನೀಡಲಾಯಿತು. ಇದನ್ನೂ ಓದಿ: ಮತ್ತೆ ಪ್ರಧಾನಿಯಾಗಿ ಮೋದಿ ಪದಗ್ರಹಣ – ಪುರಿ ಬೀಚ್‌ನಲ್ಲಿ ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ
Advertisement
ಸಂಸತ್ ಚುನಾವಣೆ ಘೋಷಣೆಯಾದ ನಂತರ, ನಡ್ಡಾ ಅವರು ದೇಶದಾದ್ಯಂತ ಸುಮಾರು 140 ಪ್ರಚಾರಗಳನ್ನು ನಡೆಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೇಂದ್ರದಲ್ಲಿ ಮಂತ್ರಿ ಸ್ಥಾನ ಇಲ್ಲ: ತಮಿಳುನಾಡು ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಮುಂದುವರಿಕೆ
Advertisement
ಕಾನೂನು ಪದವಿಯನ್ನು ಪಡೆದಿರುವ ನಡ್ಡಾ ಅವರು ಪಕ್ಷದ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಬಿಹಾರ, ಉತ್ತರ ಪ್ರದೇಶ, ಕೇರಳ, ಮಹಾರಾಷ್ಟ್ರ ಮತ್ತು ಪಂಜಾಬ್ ಹಲವಾರು ರಾಜ್ಯಗಳಲ್ಲಿ ಚುನಾವಣಾ ಪ್ರಚಾರದ ನೇತೃತ್ವವನ್ನು ಜೆ.ಪಿ ನಡ್ಡಾ ವಹಿಸಿದ್ದರು. ಇದನ್ನೂ ಓದಿ: ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್