ಕೈ ಅವರದು, ಕಾಲು ಅವರದು, ಎಲ್ಲಾದರೂ ಇಟ್ಟುಕೊಳ್ಳಲಿ: ಹ್ಯಾರಿಸ್

Public TV
3 Min Read
MLA NA Haris

ಬೆಂಗಳೂರು: ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವುದಾಗಿ ಹೇಳುತ್ತಿದ್ದಾರೆ ಅಲ್ಪಸಂಖ್ಯಾತರಲ್ಲೇ ಹಲವು ಗುಂಪುಗಳಾಗಿವೆ ಅನ್ನೋದೆಲ್ಲಾ ಸುಳ್ಳು. ಇಬ್ರಾಹಿಂ ಅವರು ಕಾಲು ಹೊರಗಿಟ್ಟಿದ್ದಾರೋ, ಇಲ್ಲವೋ ಅದು ಅವರ ವೈಯಕ್ತಿಕ ನಿರ್ಧಾರ. ನಾವು ಅದನ್ನು ಪ್ರಶ್ನಿಸುವುದಿಲ್ಲ. ಅವರ ಕೈ, ಅವರ ಕಾಲು ಎಲ್ಲಾದರೂ ಇಟ್ಟುಕೊಳ್ಳಲಿ ಎಂದು ಎಂದ ಶಾಸಕ ಹ್ಯಾರಿಸ್ ಹೇಳಿದ್ದಾರೆ.

ನಾವು ಎಲ್ಲರನ್ನು ಜೊತೆಗೂಡಿಸುವ ಕೆಲಸ ಮಾಡುತ್ತೇವೆ. ಸದ್ಯ ಪಕ್ಷದಲ್ಲಿ ನಾವು ಎಲ್ಲರೂ ಜೊತೆಯಾಗಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ತಮ್ಮ ಅಭಿಪ್ರಾಯ, ಅಸಮಾಧಾನ ಹೊರಹಾಕಬಹುದು. ಪಕ್ಷದಲ್ಲಿ ಅಲ್ಪಸಂಖ್ಯಾತರ ವಿಚಾರವಾಗಿ ತಿರ್ಮಾನ ಕೈಗೊಳ್ಳಲು ಅದಕ್ಕೆ ಘಟಕವಿದೆ. ನಾವು ಇಬ್ರಾಹಿಂ ಅವರ ಜೊತೆ ಮಾತನಾಡುತ್ತಿದ್ದೇವೆ. ಜಬ್ಬಾರ್ ಅವರು ಕೂಡ ಅವರ ಜೊತೆ ಮಾತನಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

ಸಿ.ಎಂ ಇಬ್ರಾಹಿಂ ಅವರು ಕೂಡ ನಮ್ಮ ನಾಯಕರು. ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ಅನ್ಯಾಯವಾಗಿಲ್ಲ. ನಮಗೆ ನ್ಯಾಯಯುತವಾಗಿ ಸಿಗಬೇಕಾದ ಎಲ್ಲ ನ್ಯಾಯ ಸಿಗುತ್ತಿದೆ. ಅಲ್ಪಸಂಖ್ಯಾತರಿಗೆ ಸರಿಯಾಗಿ ನ್ಯಾಯ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ನಾನು ಇಲ್ಲಿ ಶಾಸಕನಾಗಿ ಕೂತಿರುವುದಕ್ಕೆ ಕಾರಣ ಕಾಂಗ್ರೆಸ್. ಒಬ್ಬೊಬ್ಬ ನಾಯಕರು ತಮ್ಮ ಅಭಿಪ್ರಾಯವನ್ನು ಹೇಳಿರಬಹುದು. ಪಕ್ಷದ ವಿಚಾರ ಬಂದರೆ ನಾವೆಲ್ಲರೂ ಜೊತೆಯಾಗಿದ್ದೇವೆ ಎಂದರು. ಇದನ್ನೂ ಓದಿ: ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ನಾಯಕರನ್ನು ಹಂತ ಹಂತವಾಗಿ ರಾಜಕೀಯವಾಗಿ ಮುಗಿಸುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಪಸಂಖ್ಯಾತ ನಾಯಕರನ್ನು ಯಾರು ಮುಗಿಸಿದ್ದಾರೆ ಎಂದು ಜನ ನೋಡಿದ್ದಾರೆ. ತಮ್ಮ ಪಕ್ಷದಲ್ಲಿದ್ದ ಅಲ್ಪಸಂಖ್ಯಾತರಿಗೆ ಅವರು ಯಾವ ಸ್ಥಾನಮಾನ ಕೊಟ್ಟಿದ್ದರು ಎಂದು ಆ ಪಕ್ಷದಲ್ಲಿದ್ದ ನಾಯಕರೇ ಹೇಳಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:   ಅಪ್ಪು ಸರ್ ಎಂದರೆ ನನಗೆ ಹುಚ್ಚು ಅಭಿಮಾನ: ಅನುಶ್ರೀ

ಕಳೆದ ಉಪಚುನಾವಣೆಯಲ್ಲಿ ಏನಾಯಿತು ಎಂದು ನಾವೆಲ್ಲರೂ ನೋಡಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಮಾತನಾಡುವ ಸ್ವಾತಂತ್ರ್ಯ ಇದೆ. ಅದಕ್ಕಾಗಿ ಮುಕ್ತವಾಗಿ ಮಾತನಾಡುತ್ತಾರೆ. ಇದೇ ರೀತಿ ಬಿಜೆಪಿಯಲ್ಲಿ ಮಾತನಾಡಲು ಸಾಧ್ಯವೇ? ಇಲ್ಲಿ ನಮಗೆ ಸಿಗುವ ಹಕ್ಕು, ಬೇರೆಲ್ಲೂ ಸಿಗುವುದಿಲ್ಲ ಎಂಬುದು ನಮ್ಮ ಅಭಿಪ್ರಾಯ. ಸ್ಥಾನಮಾನದ ವಿಚಾರವಾಗಿ ನಾವು ಪಕ್ಷದ ಒಳಗೆ ಕೂತು ಚರ್ಚೆ ಮಾಡುತ್ತೇವೆ. ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಸ್ಥಾನಮಾನ ಅಷ್ಟೇ ಅಲ್ಲ ಅವರಿಗಾಗಿ ಸರ್ಕಾರ ಇದ್ದಾಗ ಎಷ್ಟು ಅನುದಾನ ನೀಡಿ ಯಾವ ರೀತಿ ಕಾರ್ಯಕ್ರಮ ನೀಡಲಾಗಿದೆ ಎಂಬುದು ಮುಖ್ಯ. ನಮ್ಮ ಸರ್ಕಾರ ಇದ್ದಾಗ ನೀಡಲಾದ ಅನುದಾನ, ಈಗ ಯಾವ ರೀತಿ ಕಡಿಮೆಯಾಗಿದೆ. ಯೋಜನೆಗಳು ಯಾವ ರೀತಿ ಹಳ್ಳ ಹಿಡಿದಿವೆ, ವಿದ್ಯಾರ್ಥಿ ವೇತನ ನಿಂತಿದೆ ಎಂಬುದನ್ನು ಗಮನಿಸಬೇಕು. ಈ ಅನ್ಯಾಯವನ್ನು ಕೇಳುವ ಕೆಲಸ ಮಾಡಬೇಕಿದೆ. ವಿರೋಧ ಪಕ್ಷವಾಗಿ ನಾವು ನಮ್ಮ ಕೆಲಸ ಮಾಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಜಬ್ಬಾರ್, ಶಾಸಕರಾದ ಎನ್.ಎ ಹ್ಯಾರಿಸ್, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಜಿ.ಎ ಬಾವಾ, ಕೆಪಿಸಿಸಿ ಕಾರ್ಯದರ್ಶಿ, ಮೆಹ್ರೊಜ್ ಖಾನ್, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *