Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ಬಿಜೆಪಿ, ಕಾಂಗ್ರೆಸ್ ಯತ್ನ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ಬಿಜೆಪಿ, ಕಾಂಗ್ರೆಸ್ ಯತ್ನ: ಎಚ್‍ಡಿಕೆ

Bengaluru City

ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ಬಿಜೆಪಿ, ಕಾಂಗ್ರೆಸ್ ಯತ್ನ: ಎಚ್‍ಡಿಕೆ

Public TV
Last updated: November 10, 2021 8:49 pm
Public TV
Share
3 Min Read
KUMARASWAMY
SHARE

-ದಿಲ್ಲಿಯಲ್ಲಿ ರಫೆಲ್, ರಾಜ್ಯದಲ್ಲಿ ಬಿಟ್ ಕಾಯಿನ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‍ನಿಂದ ಬಿರುಸಿನ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ.

KUMARASWAMY 1

ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ಜನತಾ ಪರ್ವದ ಎರಡನೇ ಹಂತದ ಸಂಘಟನಾ ಕಾರ್ಯಗಾರ ಜನತಾ ಸಂಗಮದ ಮೂರನೇ ದಿನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿವೆ. ಆ ಮೂಲಕ ಇಡೀ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿವೆ ಎಂದು ಆರೋಪ ಮಾಡಿದರು. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ಗೃಹಸಚಿವರೇ ಧಮ್ ಇದ್ದರೆ ಅರೆಸ್ಟ್ ಮಾಡಿ: ಡಿಕೆಶಿ

ಕೆಲ ದಿನಗಳಿಂದ ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಬಿಟ್ ಕಾಯಿನ್ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ದಿಲ್ಲಿಯಲ್ಲಿ ರಫೆಲ್ ಯುದ್ಧ ವಿಮಾನಗಳ ಖರೀದಿ ಬಗ್ಗೆ ಚರ್ಚೆ ನಡೆಯುತ್ತಿದೆ. ಎರಡೂ ಪಕ್ಷಗಳ ಕೆಸರೆರಚಾಟದಲ್ಲಿ ನಿರತವಾಗಿವೆ. ಬಿಟ್ ಕಾಯಿನ್ ಹಗರಣ ಬಗ್ಗೆ ಗಂಭೀರ ನಿಲುವು ತಾಳಬೇಕು. ಸರ್ಕಾರ ಪ್ರಾರಂಭಿಕ ಹಂತದಲ್ಲಿ ಪ್ರಚಾರಕ್ಕೆ ಮಾತ್ರ ಚರ್ಚೆ ಮಾಡಿ ನಂತರ ನಿರ್ಲಕ್ಷ್ಯ ಮಾಡುವುದು ಬೇಡ ಎಂದರು.

2016-17ರಿಂದಲೂ ಈ ಹಗರಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಆಗಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಆಗ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರು. ಆಗಲೇ ಅವರು ಕಠಿಣವಾಗಿ ವರ್ತಿಸಿ ಪ್ರಾರಂಭಿಕ ಹಂತದಲ್ಲೇ ಕ್ರಮ ತೆಗೆದುಕೊಂಡಿದ್ದರೆ ಇಷ್ಟು ದೊಡ್ಡ ಪ್ರಮಾಣದಲ್ಲಿ ದಂಧೆ ನಡೆಯುತ್ತಿರಲಿಲ್ಲ. ತನಿಖೆಯಲ್ಲಿ ಜಾರಿ ನಿರ್ದೇಶನಾಲಯ ತೊಡಗಿದೆ ಎನ್ನುವ ಮಾಹಿತಿ ಇದೆ. ಸರ್ಕಾರ ನಡೆಸುವವರು, ಸರ್ಕಾರದ ಅಧೀನ ಸಂಸ್ಥೆಗಳು ಜನರಿಗೆ ಸರಿಯದ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನಂತೂ ನಿಖರ ಮಾಹಿತಿ ಇಲ್ಲದೆ ಯಾವುದೇ ಹೇಳಿಕೆ ನೀಡಲು ತಯಾರಿಲ್ಲ. ಆದರೆ, ಜನರ ಮುಂದೆ ವಾಸ್ತವಾಂಶ ಇಡಲು ಯಾರು ತಯಾರಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!

ನಾಲ್ಕು ಜನರಿಗೆ ತೊಂದರೆ ಕೊಡುವುದರಿಂದ ಉಪಯೋಗ ಇಲ್ಲ. ಆಗಿರುವ ಲೋಪವನ್ನು ಸರಕಾರ ಸರಿ ಮಾಡಬೇಕು. ಇನ್ನು, ಕೇಂದ್ರ ಸರಕಾರದ ಆದೇಶದ ಮೇರೆಗೆ ಇಡಿ ತನಿಖೆಗೆ ಶಿಫಾರಸು ಮಾಡಿದ್ದಾರೋ ಅಥವಾ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆಯೋ ಗೊತ್ತಿಲ್ಲ. ಇದರ ಮೇಲೆ ಕೂಡ ಈಗ ಚರ್ಚೆ ನಡೆಯುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಎಲ್ಲಾ ಮಾಹಿತಿ ರವಾನೆಯಾಗಿದೆ. ಆದರೆ, ರಾಜ್ಯ ಸರ್ಕಾರ ಏನು ಮಾಡುತ್ತದೆಯೋ ನೋಡೋಣ ಎಂದರು. ಇದನ್ನೂ ಓದಿ: ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೈಲಿನಿಂದ ಬಿಡುಗಡೆ

ಕಾಂಗ್ರೆಸ್ ನಾಯಕರು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಅಲ್ಲಿಯೂ ಸರ್ಕಾರದ ಅಧಿಕಾರಿಗಳೇ ಇರುತ್ತಾರೆ. ನ್ಯಾಯಾಂಗ ತನಿಖೆ ವರದಿ ಕೂಡ ಎಲ್ಲಿಗೆ ತೆಗೆದುಕೊಂಡು ಹೋಗಿ ನಿಲ್ಲಿಸುತ್ತಾರೆ? ಹಿಂದೆ ಅರ್ಕಾವತಿ ಡಿನೋಟಿಫಿಕೇಷನ್ ಬಗ್ಗೆ ತನಿಖೆ ನಡೆಸಿದ ನ್ಯಾ.ಕೆಂಪಣ್ಣ ಆಯೋಗದ ವರದಿ ಏನಾಯಿತು? ಬಿಟ್ ಕಾಯಿನ್ ತನಿಖೆ ವರದಿಯ ಗತಿಯೂ ಅಷ್ಟೇ ಆಗುತ್ತದೆ ಎಂದು ಕಾಂಗ್ರೆಸ್‍ಗೆ ತಿರುಗೇಟು ಕೊಟ್ಟರು.

ರಾಜ್ಯದಲ್ಲಿ ಐದು ವರ್ಷ ಸರ್ಕಾರ ನಡೆಸಿದವರು ಸುಮ್ಮನೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದ ಪ್ರಯೋಜನ ಏನು? ಈಗ ಮಾತನಾಡುವ ಬದಲು ತಮ್ಮ ಕಾಲದಲ್ಲಿಯೇ ಕ್ರಮ ವಹಿಸಿದ್ದರೆ ಬಿಟ್ ಕಾಯಿನ್ ದಂಧೆ ಇಷ್ಟು ದೂರ ಬರುತ್ತಿರಲಿಲ್ಲ. ಆಗ ಸುಮ್ಮನಿದ್ದು ಈಗ ಜನರ ಮುಂದೆ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದ್ದರೆ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಹ್ಯಾಕರ್ ಶ್ರೀಕಿಯಿಂದ 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ

TAGGED:bitcoinbjpcongressgovernmenthd kumaraswamynarendra modiPublic TVsiddaramaiahಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ನರೇಂದ್ರ ಮೋದಿಪಬ್ಲಿಕ್ ಟಿವಿಬಿಜೆಪಿಬಿಟ್ ಕಾಯಿನ್ಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
1 hour ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
2 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
2 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
2 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
2 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?