ನವದೆಹಲಿ: ದೇಶದ ಅತಿದೊಡ್ಡ ಜೇಬುಗಳ್ಳ ಎಂದರೆ ಅದು ಕಾಂಗ್ರೆಸ್ ಎಂದು ಆಢಳಿತ ಪಕ್ಷ ತಿರುಗೇಟು ನೀಡಿದೆ.
ರಾಹುಲ್ ಗಾಂಧಿ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ, ಜೇಬುಳ್ಳರ ಬಗ್ಗೆ ಎಚ್ಚರದಿಂದ ಇರಿ ಎಂದು ಟ್ವೀಟ್ ಮಾಡಿದ್ದರು. tax extortion ಎಂದು ಉಲ್ಲೇಖಿಸಿದ್ದರು. ಇದಕ್ಕೆ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ನೀಡಿದ ಹೇಳಿಕೆಯನ್ನು ಬಿಜೆಪಿ ಪಕ್ಷದ ಅಧಿಕೃತ ಖಾತೆಯಲ್ಲಿ ಹಂಚಿಕೊಂಡು ರಾಹುಲ್ ಅವರಿಗೆ ತಿರುಗೇಟು ನೀಡಿದೆ.
ದೇಶದಲ್ಲಿ ಕಾಂಗ್ರೆಸ್‍ಗಿಂತ ದೊಡ್ಡ ಜೇಬುಗಳ್ಳರಿಲ್ಲ. ಕಾಂಗ್ರೆಸ್ ಪಕ್ಷವೇ ಜೇಬುಗಳ್ಳ ಪಕ್ಷವಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ
1 नवंबर को राहुल गांधी जी ने ट्वीट किया- जेब कतरों से सावधान।
राहुल गांधी जी, ऐसा प्रतीत हो रहा कि कांग्रेस से बड़ा जेबकतरा पूरे देश में तो कोई नहीं है।
जेबकतरा तो कांग्रेस पार्टी बन ही गई है, लेकिन उसके साथ जो उनकी गिद्ध वाली राजनीति है वो आप क्यों करते हैं?- श्री @gauravbh pic.twitter.com/6Z56G3hV6I
— BJP (@BJP4India) November 5, 2021
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ನಂತರ ಪ್ರತಿಕ್ರಿಯೆ ನೀಡಿದ್ದು, ತೈಲ ಬೆಲೆ ಇಳಿಕೆ ಮಾಡಿದ್ದು, ಹೃಯದದಿಂದ ಅಲ್ಲ, ಬದಲಾಗಿ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ ಎಂದು ಟ್ವೀಟ್ ಮಾಡಿ ಆಢಳಿತ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ
ये दिल से नहीं डर से निकला फैसला है।
वसूली सरकार की लूट को आने वाले चुनाव में जवाब देना है।#PetrolDieselPrice
— Priyanka Gandhi Vadra (@priyankagandhi) November 4, 2021
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ 10 ರೂ. ಹಾಗೂ 5 ರೂ. ಕ್ಕೆ ಇಳಿಸಿದ ಬೆನ್ನಲ್ಲೇ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರಂತರವಾಗಿತ್ತು. ಅಕ್ಟೋಬರ್ ಒಂದೇ ತಿಂಗಳಲ್ಲಿ ಸುಮಾರು 30ಕ್ಕೂ ಅಧಿಕ ಬಾರಿ ಪೈಸೆಗಳ ಲೆಕ್ಕದಲ್ಲಿ ಬೆಲೆ ಏರಿಕೆಯಾಗಿತ್ತು. ಇದರಿಂದ ಜನ ಸಾಮಾನ್ಯರಿಗೆ ನೇರವಾಗಿ ಪರಿಣಾಮ ಬೀರುವುದಲ್ಲದೇ ಪೆಟ್ರೋಲ್, ಡೀಸೆಲ್ ಅವಲಂಬಿತ ಎಲ್ಲ ವಸ್ತುಗಳ ಬೆಲೆಯೂ ಅಧಿಕವಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಜನ ಸಾಮಾನ್ಯರ ಆಕ್ರೋಶ ಎದುರಿಸಲಾಗದ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದವು. ಈ ವಿಚಾರವನ್ನು ಗಣನೆಗೆ ತೆಗೆದುಕೊಂಡ ಮೋದಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ