ಚಿಕ್ಕಮಗಳೂರು: ರಾಜ್ಯದೆಲ್ಲೆಡೆ ಸುರಿಯುತ್ತಿರುವ ಅತಿವೃಷ್ಟಿಯ ಹಿನ್ನೆಲೆ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಹಾಗೂ ಶಾಸಕ ಟಿ.ಡಿ ರಾಜೇಗೌಡ ಅವರು ಶೃಂಗೇರಿ ಜಗದ್ಗುರುಗಳ ಮೊರೆ ಹೋಗಿದ್ದಾರೆ.
ಶೃಂಗೇರಿ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಬಳಿಗೆ ಕಾಂಗ್ರೆಸ್, ಬಿಜೆಪಿ ಪಕ್ಷದಿಂದ ಒಟ್ಟಾಗಿ ತೆರಳಿದ್ದು, ಶಾರದಾಂಬೆಗೆ ಪೂಜೆ ಸಲ್ಲಿಸಿ ಮಳೆ ನಿಲ್ಲುವಂತೆ ಪ್ರಾರ್ಥನೆ ನಡೆಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಮಳೆಯ ಆರ್ಭಟ – 10 ದಿನಗಳಲ್ಲಿ 30 ಕೋಟಿ ನಷ್ಟ
Advertisement
Advertisement
Advertisement
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ವಾಡಿಕೆಗಿಂದ ದುಪ್ಪಟ್ಟು ಮಳೆ ಸುರಿದ ಪರಿಣಾಮ ಇದೀಗ ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆ ರಾಜಕಾರಣಿಗಳು ಕೊನೆಯದಾಗಿ ಮಳೆ ನಿಯಮಿತವಾಗಿ ಬೀಳುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಾರದ ನಂತರ ಉಡುಪಿಯಲ್ಲಿ ಶಾಲೆ ಶುರು – ನೆರೆ ಲೆಕ್ಕಿಸದೇ ದೋಣಿ ಹತ್ತಿದ ವಿದ್ಯಾರ್ಥಿಗಳು