ಬೆಂಗಳೂರು: ಆಪರೇಷನ್ ಲೋಟಸ್ ರಾಕೆಟ್ ನಡೆಯಲು ಸಿದ್ಧತೆ ನಡೆದಿದೆ ಎನ್ನುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತುರ್ತು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಮಂಗಳವಾರ ಎಲ್ಲ ಶಾಸಕರು ಬೆಂಗಳೂರಿಗೆ ಬರುವಂತೆ ಬಿಎಸ್‍ವೈ ಬುಲಾವ್ ನೀಡಿದ್ದು, ಮಧ್ಯಾಹ್ನ 3.30ಕ್ಕೆ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದೆ.
ಫೆ.6 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿರುವ ಬೆನ್ನಲ್ಲೇ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಪ್ತ ರಾಮಲಾಲ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮಂಗಳವಾರ ಸಂಜೆ 6 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಮಲಾಲ್ ಜೊತೆ ರಾಜ್ಯ ನಾಯಕರು ಚರ್ಚಿಸಲಿದ್ದಾರೆ.
ಈ ಬೆಳವಣಿಗೆಗಳ ಮಧ್ಯೆ ಯಡಿಯೂರಪ್ಪ ಅವರ ಮೈಸೂರು ಪ್ರವಾಸ ದಿಢೀರ್ ರದ್ದಾಗಿದೆ. ನಿಗದಿ ಪ್ರಕಾರ ಬಿಎಸ್‍ವೈ ಸುತ್ತೂರು ಜಾತ್ರೆಗೆ ತೆರಳಬೇಕಿತ್ತು. ಆದರೆ ಆಪರೇಷನ್ ಲೋಟಸ್ ರಾಕೆಟ್ ಅಂತಿಮ ಹಂತ ತಲುಪಿರುವ ಹಿನ್ನೆಲೆಯಲ್ಲಿ ಮೈಸೂರು ಪ್ರವಾಸ ರದ್ದು ಮಾಡಿದ್ದಾರೆ ಎನ್ನಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv