ಲಕ್ನೋ: ಬಿಜೆಪಿ ಕಾರ್ಪೊರೇಟರ್ (BJP Corporator) ಮಗ ಆನ್‌ಲೈನ್‌ನಲ್ಲಿ (Online) ಪಾಕಿಸ್ತಾನಿ (Pakistan) ಹುಡುಗಿಯನ್ನು ವರಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಜೌನ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.
‘ನಿಕಾಹ್’ ಮೂಲಕ ಪಾಕ್ ಯುವತಿಯೊಂದಿಗೆ ವಿವಾಹ ನೆರವೇರಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಪೊರೇಟರ್ ತಹಸೀನ್ ಶಾಹಿದ್ ಅವರು ತಮ್ಮ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್‌ಗೆ ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರೊಂದಿಗೆ ವಿವಾಹ ನಿಶ್ಚಯಿಸಿದ್ದರು. ಪಾಕಿಸ್ತಾನ ಮತ್ತು ಭಾರತದ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯಿಂದಾಗಿ ವೀಸಾಗೆ ಅರ್ಜಿ ಸಲ್ಲಿಸಿದರೂ ವರನಿಗೆ ವೀಸಾ ಸಿಕ್ಕಿರಲಿಲ್ಲ. ಇದನ್ನೂ ಓದಿ: ಮುಡಾ ಮೇಲಿನ ಇ.ಡಿ ದಾಳಿ ಅಂತ್ಯ – ಸತತ 29 ಗಂಟೆ ಅಧಿಕಾರಿಗಳಿಗೆ ಡ್ರಿಲ್
ಈ ಬೆನ್ನಲ್ಲೇ ವಧುವಿನ ತಾಯಿ ರಾಣಾ ಯಾಸ್ಮಿನ್ ಜೈದಿ ಅನಾರೋಗ್ಯಕ್ಕೆ ಒಳಗಾಗಿ ಪಾಕಿಸ್ತಾನದ ಐಸಿಯುಗೆ ದಾಖಲಾದರು. ಈ ಹಿನ್ನೆಲೆ ಮದುವೆ ಸಮಾರಂಭವನ್ನು ಆನ್‌ಲೈನ್‌ನಲ್ಲಿ ನಡೆಸಲು ಶಾಹಿದ್ ನಿರ್ಧರಿಸಿದ್ದಾರೆ. ಲಾಹೋರ್‌ನ ವಧುವಿನ ಕುಟುಂಬದವರು ಹಾಗೂ ವರನ ಕುಟುಂಬಸ್ಥರು ‘ನಿಕಾಹ್’ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು – ದೋಸ್ತಿ ನಾಯಕರಲ್ಲಿ ಮೂಡದ ಒಮ್ಮತದ ನಿರ್ಧಾರ
ಶಿಯಾ ಧಾರ್ಮಿಕ ಮುಖಂಡ ಮೌಲಾನಾ ಮಹ್ಫೂಜುಲ್ ಹಸನ್ ಖಾನ್ ಈ ಬಗ್ಗೆ ಪ್ರತಿಕ್ರಿಯಿಸಿ, ಇಸ್ಲಾಂನಲ್ಲಿ ‘ನಿಕಾಹ್’ಗೆ ಮಹಿಳೆಯ ಒಪ್ಪಿಗೆ ಅತ್ಯಗತ್ಯ. ಎರಡೂ ಕಡೆಯ ಮೌಲಾನಾಗಳು ಒಟ್ಟಾಗಿ ಸಮಾರಂಭವನ್ನು ನಡೆಸಿದಾಗ ಆನ್‌ಲೈನ್ ‘ನಿಕಾಹ್’ ಸಾಧ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ನಿಷೇಧಿತ ಡ್ರಗ್ಸ್ ಪತ್ತೆ – ಮಲಯಾಳಂ ನಟಿ ಬಂಧನ