ನವದೆಹಲಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಟ್ವೀಟ್‌ನಲ್ಲೇನಿದೆ?
ಕರ್ನಾಟಕದಲ್ಲಿ ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರ ತಮ್ಮದೇ ಕಾರ್ಯಕರ್ತನನ್ನು ಬಲಿ ಪಡೆದಿದೆ. ಸಂತ್ರಸ್ತ ಪ್ರಧಾನಿಗೆ ಸಲ್ಲಿಸಿದ ಮನವಿಗೆ ಉತ್ತರ ಸಿಕ್ಕಿಲ್ಲ. ಈ ಪ್ರಕರಣಕ್ಕೆ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಇಬ್ಬರೂ ಪಾಲುದಾರರು. ಇದು “ಬಿಜೆಪಿ ಕರಪ್ಷನ್ ಫೈಲ್ಸ್” ಎಂದು ಟ್ವೀಟ್ ಮಾಡಿ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಂತೋಷ್ ಪ್ರಕರಣ ಎಲ್ಲಾ ಆ್ಯಂಗಲ್‌ನಲ್ಲೂ ತನಿಖೆಯಾಗುತ್ತಿದೆ: ಆರಗ ಜ್ಞಾನೇಂದ್ರ
BJP’s 40% Commission Govt in Karnataka has claimed the life of their own Karyakarta.
The victim’s pleas to the PM went unanswered.
PM & CM are complicit.#BJPCorruptionFiles pic.twitter.com/x6LUJfaQX5
— Rahul Gandhi (@RahulGandhi) April 12, 2022
ಇದು ಆತ್ಮಹತ್ಯೆಯಲ್ಲ, ಸರ್ಕಾರಿ ಕೊಲೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಕೊಲೆ ಮಾಡಿದ ಬಿಜೆಪಿ ಸರ್ಕಾರ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ಒಂದು ಕ್ಷಣವೂ ಅಧಿಕಾರದಲ್ಲಿರಲು ಅನರ್ಹ. ಈ ಕೂಡಲೇ ಈಶ್ವರಪ್ಪರನ್ನು ಸಂಪಟುದಿಂದ ವಜಾ ಮಾಡಿ, ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.