ನವದೆಹಲಿ: ಕಾಂಗ್ರೆಸ್ (Congress) ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (SC-ST) ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಿಕೆ ಖಂಡಿಸಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು. ಸಂಸತ್‌ನಲ್ಲಿರುವ ಗಾಂಧಿ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಲಿತ ಸಂಸದರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಸದರಾದ ಮುನಿಸ್ವಾಮಿ, ಉಮೇಶ್ ಜಾಧವ್, ದೇವೇಂದ್ರಪ್ಪ, ಅಮರೇಶ ನಾಯಕ್ ಭಾಗಿಯಾಗಿದ್ದರು. ಇದೇ ವೇಳೆ ಹಲವು ರಾಜ್ಯಗಳ ಎಸ್ಸಿ-ಎಸ್ಟಿ ಸಮುದಾಯದ ಸಂಸದರು ಭಾಗಿಯಾಗಿ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ: ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ- ಕಾಂಗ್ರೆಸ್ ಪಕ್ಷ ವಂಚಕರ ಸಂತೆ: ಛಲವಾದಿ ನಾರಾಯಣಸ್ವಾಮಿ
Advertisement
Advertisement
ಪ್ರತಿಭಟನೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಹಿಂದ ಹೆಸರಿನಲ್ಲಿ ದಲಿತರ ಉದ್ಧಾರ ಮಾಡುವುದಾಗಿ ಹೇಳಿದ ಸಿದ್ದರಾಮಯ್ಯ ಅವರು ಎಸ್ಸಿ ಎಸ್ಟಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸಲು ವಿಫಲವಾಗಿ ದಲಿತ ಅಭಿವೃದ್ಧಿಗೆ ಇಟ್ಟ ಹಣವನ್ನು ಬಳಕೆಗೆ ನಿರ್ಧರಿಸಿದೆ. ಇದರ ಪರಿಣಾಮವಾಗಿ ಎಸ್ಸಿ ಎಸ್ಟಿಗೆ ಅಭಿವೃದ್ಧಿ ಕೊರತೆಯಾಗಲಿದೆ. ಈ ಹಣ ವಾಪಸ್ ಪಡೆಯಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Advertisement
Advertisement
ಸಂಸದ ಮುನಿಸ್ವಾಮಿ ಮಾತನಾಡಿ, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಟೀಂ ದಲಿತರಿಗೆ ಮೀಸಲಿಟ್ಟ ಹಣ ಬಳಕೆ ಮಾಡುತ್ತಿದೆ. ಗ್ಯಾರಂಟಿಗೆ ಬಳಕೆ ಮಾಡುತ್ತಿದೆ. ಈ ಮೂಲಕ ದಲಿತರಿಗೆ ಅವಮಾನ ಮಾಡುತ್ತಿದೆ. ಸರ್ಕಾರದ ನಿರ್ಧಾರದಿಂದ ದಲಿತರ ಕೇರಿಗಳ ಅಭಿವೃದ್ಧಿ ಕುಂಠಿತಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು. ಮತ್ತೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು: ಹೆಚ್‌ಡಿಕೆಗೆ ಡಿಕೆಶಿ ಟಾಂಗ್
Web Stories