ಸಿನಿಮಾ ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಕವಿರಾಜ್ (Kaviraj) ಬಿಜೆಪಿಯ (BJP) ಸೋಲನ್ನು ವಿಭಿನ್ನವಾಗಿ ವಿಶ್ಲೇಷಿಸಿದ್ದಾರೆ. ಬಿಜೆಪಿ ಸೋಲಿಗೆ ಕಾರಣ ಏನು ಎನ್ನುವುದರ ಕುರಿತು ಅವರು ಫೇಸ್ ಬುಕ್ (Facebook) ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸಾಕಷ್ಟು ವೈರಲ್ (Viral) ಆಗಿದೆ ಮತ್ತು ನಾನಾ ರೀತಿಯ ಕಾಮೆಂಟ್ ಗಳು ಕೂಡ ಬಂದಿವೆ. ಬಿಜೆಪಿ ಸೋಲಿಗೆ ಕವಿರಾಜ್ ಕೊಟ್ಟ ಕಾರಣ ಇಲ್ಲಿದೆ.
Advertisement
ಪದೇ ಪದೇ ನಾಡಿನ ಶಾಂತಿ ಕದಡಿದ್ದು, ಶಾಲೆ – ಪಠ್ಯಪುಸ್ತಕಗಳಲ್ಲೂ ರಾಜಕೀಯ ತಂದು ಮಲೀನಗೊಳಿಸಿದ್ದು, ಕುವೆಂಪು , ಬಸವಣ್ಣ, ಅಂಬೇಡ್ಕರ್, ಅವರಂತಹ ಮಹನೀಯರನ್ನು ಅವಮಾನಿಸಿದ್ದು. ಧರ್ಮ – ದೇವರು ಎಲ್ಲವನ್ನು ರಾಜಕೀಯ ಅಸ್ತ್ರವಾಗಿಸಿಕೊಂಡಿದ್ದು, ಕನ್ನಡತನ, ಕನ್ನಡದ ಆಸ್ಮಿತೆಗಳ ವಿರುದ್ಧ ನಿಂತಿದ್ದು , ಹಿಂದಿ ಹೇರಿಕೆ ಬೆಂಬಲಿಸಿದ್ದು, ಈ ಮಣ್ಣಿನ ಹೋರಾಟಗಾರರನ್ನು ಕಡೆಗಣಿಸಿ , ಶಿವಾಜಿ, ಸಾವರ್ಕರ್ ಅಂತಹಾ ಉತ್ತರದ ಹೋರಾಟಗಾರರನ್ನು ಮೆರೆಸಿದ್ದು. ಇದನ್ನೂ ಓದಿ:ಬಂದೂಕಿನೊಂದಿಗೆ ಆಟವಾಡಿದ ‘ಬಿಗ್ ಬಾಸ್’ ಅಬ್ದು ರೋಜಿಕ್ ವಿರುದ್ಧ ಪ್ರಕರಣ ದಾಖಲು
Advertisement
Advertisement
ಹಿಂದೆಂದು ಕಂಡಿರದ ಭ್ರಷ್ಟಾಚಾರ -ಅಹಂಕಾರದ ಅಡಳಿತ, ಬೆಲೆ ಏರಿಕೆಗಳಿಂದ ಬಡವರ ಬದುಕನ್ನು ಸಂಕಷ್ಟಕ್ಕೆ ದೂಡಿದ್ದು, ಪದೇ ಪದೇ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡು ಜನ ಉಗಿದ ನಂತರ ಯೂ ಟರ್ನ್ ಹೊಡೆದಿದ್ದು, ಕರೋನಾದಂತ ವಿಕೋಪದ ಸಮಯದಲ್ಲಿ ಜೀವಗಳನ್ನು ರಕ್ಷಿಸುವಲ್ಲಿ ಹೊಣೆಗೇಡಿತನ ತೋರಿದ್ದು, ಅಮಾಯಕ ಯುವಕರ ಹೆಣಗಳನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದು.
Advertisement
ನಾಗಪುರ ನಿರ್ದೇಶಿತ ಮೂಲಭೂತವಾದದ ಪ್ರಯೋಗಗಳಿಗೆ ಕರ್ನಾಟಕವನ್ನು ಪ್ರಯೋಗಶಾಲೆಯಾಗಿಸಿದ್ದು, ಆಪರೇಷನ್ ಕಮಲ, ರೆಸಾರ್ಟ್ ರಾಜಕೀಯದಂತ ಅನೈತಿಕ ರಾಜಕಾರಣದಿಂದ ರಾಷ್ಟ್ರಮಟ್ಟದಲ್ಲಿ ನಾಡಿನ ಗೌರವ ಹಾಳುಮಾಡಿದ್ದು, ವಿರೋಧಿಸಿದವರನ್ನು ಹೆದರಿಸಲು ಆಡಳಿತ ವ್ಯವಸ್ಥೆಯನ್ನು ಬಳಸಿಕೊಂಡಿದ್ದು ಇವೆಲ್ಲವುಗಳ ವಿರುದ್ಧ ಕರ್ನಾಟಕದ ಮತದಾರರು ಜಾಗೃತನಾಗಿ ತೀರ್ಪು ನೀಡಿದ್ದಾರೆ.
ಕೇಂದ್ರ ನಾಯಕರ ಅಬ್ಬರದ ರ್‍ಯಾಲಿಯಿಂದ ಅಲೆ ಸೃಷ್ಟಿಯಾಗಿಬಿಡುತ್ತೆ ಎಂಬ ಭ್ರಮೆ, ಹಣ ಬಲದ ಧಿಮಾಕು , ಜಾತಿ ರಾಜಕೀಯ , ದ್ವೇಷ ಭಾಷಣ ಇವಕ್ಕೆಲ್ಲಾ ಸೊಪ್ಪು ಹಾಕದ ಕರುನಾಡಿನ ಮತದಾರರ ಪ್ರಜ್ಞಾವಂತಿಕೆ ಬಗ್ಗೆ ಹೆಮ್ಮೆಯೆನಿಸುತ್ತದೆ. ಅತಂತ್ರ ಫಲಿತಾಂಶ ಕೊಟ್ಟರೇ ಅನೈತಿಕ ರಾಜಕಾರಣದ ರೂವಾರಿಗಳು ಅದನ್ನು ಹೇಗೆಲ್ಲಾ ದುರುಪಯೋಗ ಪಡಿಸಿಕೊಂಡು ಹಣಬಲ , ಅಧಿಕಾರ ಬಲದಿಂದ ರಾಜ್ಯದಲ್ಲಿ ಸರ್ಕಾರ ಸ್ಥಾಪಿಸುತ್ತಾರೆ ಎಂಬ ಸ್ಪಷ್ಟ ಅರಿವು ಮತದಾರ ಪ್ರಭುಗಳಿಗೆ ಇದೆ. ಹಾಗಾಗಿಯೇ ನಿರ್ಣಾಯಕ ಫಲಿತಾಂಶ ನೀಡಿ ಯಾರ್ಯಾರು ಎಲ್ಲಿರಬೇಕು ಎಂದು ಖಚಿತವಾಗಿ ತೋರಿಸಿರುವ ಮತದಾರರು ಅಭಿನಂದನಾರ್ಹರು. ಮತದಾರರ ಪ್ರಜ್ಞಾವಂತಿಕೆ ಮತ್ತು ಪ್ರಜಾಪ್ರಭುತ್ವ ಹೀಗೆ ಪ್ರಬುದ್ಧವಾಗುತ್ತ ಚಿರಾಯುವಾಗಲಿ.