– ಸ್ಮಾರ್ಟ್ ಮೀಟರ್ ಮೂಲಕ ಸರ್ಕಾರದ ಹಗಲು ದರೋಡೆ; ಸಿ.ಎನ್ ಅಶ್ವಥ್ ನಾರಾಯಣ್ ಟೀಕೆ
ಬೆಂಗಳೂರು: ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ ಮಾತ್ರವಲ್ಲದೆ, ಗ್ರಾಹಕರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಡಿಸಿಎಂ, ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್(Dr C N Ashwath Narayan) ಟೀಕಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್ ಅಶೋಕ್(R Ashok) ಮತ್ತು ಸಿ.ಎನ್ ಅಶ್ವಥ್ ನಾರಾಯಣ್ ಅವರ ನೇತೃತ್ವದ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಹಗರಣದ ಸೂಕ್ತ ತನಿಖೆಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ದೂರು ನೀಡಿದರು. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಎನ್ ಅಶ್ವಥ್ ನಾರಾಯಣ್ ಅವರು, ಸ್ಮಾರ್ಟ್ ಮೀಟರ್ ಕುರಿತಂತೆ ಗೌರವಾನ್ವಿತ ರಾಜ್ಯಪಾಲರ ಜೊತೆ ಚರ್ಚೆ ಮಾಡಿದ್ದೇವೆ ಎಂದು ವಿವರಿಸಿದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ನನ್ನನ್ನು ಮದುವೆಯಾಗು: ಪಾಕ್ ಅಧಿಕಾರಿ ಮುಂದೆ ಆಸೆ ವ್ಯಕ್ತಪಡಿಸಿದ್ದ ಜ್ಯೋತಿ
ಈ ಹಗರಣದಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿದೆ. ಸಾವಿರಾರು ಕೋಟಿ ಲೂಟಿ ನಡೆಯುತ್ತಿದೆ. ರಾಜ್ಯ ಸರ್ಕಾರ, ಇಂಧನ ಇಲಾಖೆ ಹಾಗೂ ಅಧಿಕಾರಿಗಳು ಇದರಲ್ಲಿ ಭಾಗಿ ಆಗಿರುವುದಾಗಿ ರಾಜ್ಯಪಾಲರಿಗೆ ತಿಳಿಸಲಾಗಿದೆ. ಈ ಕುರಿತು ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಇದುವರೆಗೂ ಎಫ್‌ಐಆರ್ ದಾಖಲಾಗಿಲ್ಲ. ಈ ಸಂಬಂಧ ಲೋಕಾಯುಕ್ತಕ್ಕೆ ಮತ್ತೊಮ್ಮೆ ದೂರು ನೀಡಲಾಗಿದೆ ಎಂದರು. ಇದನ್ನೂ ಓದಿ: ತುಮಕೂರು | ಕೆಮಿಕಲ್ ಸಂಪ್ ಕ್ಲೀನ್ ಮಾಡುವಾಗ ಇಬ್ಬರು ಕಾರ್ಮಿಕರು ಸಾವು, ಮತ್ತಿಬ್ಬರು ಅಸ್ವಸ್ಥ
ಅಧಿಕಾರ ದುರ್ಬಳಕೆ ಮಾಡಿದ ಇಂಧನ ಸಚಿವರು, ಇತರ ಅಧಿಕಾರಿಗಳು ಗುತ್ತಿಗೆ ಕೊಟ್ಟು ಕಾನೂನಿನ ಉಲ್ಲಂಘನೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ, ಹಗಲು ದರೋಡೆ ಮಾಡಿದ ಸ್ಮಾರ್ಟ್ ಮೀಟರ್ ಹಗರಣಕ್ಕೆ(Smart Meter Scam) ತಾರ್ಕಿಕ ಅಂತ್ಯ ಕಾಣಿಸಲು ಯೋಜಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ಹೇಳಿಕೆ ವಿವಾದ – ಅಶೋಕ ವಿವಿ ಪ್ರೊಫೆಸರ್‌ಗೆ ಮಧ್ಯಂತರ ಜಾಮೀನು
ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ಮತ್ತು ಕೇಂದ್ರ ವಿದ್ಯುತ್ ಆಯೋಗದ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುತ್ತಿರುವುದು ಪ್ರಥಮ ಉಲ್ಲಂಘನೆ. ಇಲ್ಲಿ ದುಬಾರಿ ದರ ಇದೆ. ಅರ್ಹತೆ ಇಲ್ಲದ ಗುತ್ತಿಗೆದಾರರಿಗೆ ಗುತ್ತಿಗೆ ಕೊಡಲಾಗಿದೆ. ಕಾನೂನಿನ ಉಲ್ಲಂಘನೆ, ಅಧಿಕಾರ ದುರ್ಬಳಕೆ ಮಾಡಿದ ಕುರಿತು ಮಾನ್ಯ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಗೋಲ್ಡ್ ಸ್ಮಗ್ಲಿಂಗ್(Gold Smuggling) ಪ್ರಕರಣವು ತೀವ್ರ ತನಿಖೆ ನಡೆದು ಇನ್ನಷ್ಟು ವಿವರ ಹೊರಬರುವ ವಿಶ್ವಾಸವಿದೆ ಎಂದರು.
ರತ್ನಗಂಬಳಿ ಹಾಸಿ ಸುಖದಲ್ಲಿ ತಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ಸಿನ(Congress) ಸಮರ್ಪಣಾ ಸಮಾವೇಶ, ಸಾಧನಾ ಸಮಾವೇಶ ಎಲ್ಲವೂ ಬೂಟಾಟಿಕೆ. ಇದು ಲೂಟಿ ಸರ್ಕಾರ. ರಾಜ್ಯದಲ್ಲಿ ಸಂತಸ ಮತ್ತು ಆನಂದವಾಗಿ ಇರುವವರು ಸಿಎಂ ಮತ್ತು ಅಧಿಕಾರದಲ್ಲಿರುವ ಸಚಿವ ಸಂಪುಟದ 35 ಜನರ ತಂಡ ಎಂದು ಆರೋಪಿಸಿದರು. ಇದನ್ನೂ ಓದಿ: ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಬೈರತಿ ಬಸವರಾಜ್
ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಸಿ.ಎನ್ ಅಶ್ವಥ್ ನಾರಾಯಣ್, ಶಾಸಕ ಕೆ.ಗೋಪಾಲಯ್ಯ, ಶಾಸಕ ಧೀರಜ್ ಮುನಿರಾಜು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.