ಶಿವಮೊಗ್ಗ: ನಗರದ (Shivamogga) ರಾಗಿಗುಡ್ಡದಲ್ಲಿ (Ragigudda) ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಸತ್ಯಶೋಧನಾ ಸಮಿತಿ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ನೇತೃತ್ವದ ತಂಡ ಮಾಹಿತಿ ಕಲೆಹಾಕಲು ನಗರಕ್ಕೆ ತೆರಳಿದೆ. ತಂಡದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಡಾ.ಅಶ್ವತ್ಥ್ ನಾರಾಯಣ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಚನ್ನಬಸಪ್ಪ ಇದ್ದಾರೆ. ಪ್ರಕರಣ ಹಿನ್ನೆಲೆ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿ ತಂಡ ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಶಿವಮೊಗ್ಗ ಈದ್ ಮಿಲಾದ್ ಹಬ್ಬಕ್ಕೆ 5 ಕೋಟಿ ಸಂಗ್ರಹ – ಫಂಡಿಂಗ್ ಮಾಡಿದವರ ಹಿಂದೆ ಬಿದ್ದ ಖಾಕಿ
Advertisement
Advertisement
ಮೊದಲಿಗೆ ಬಿಜೆಪಿ ಮುಖಂಡರ ತಂಡ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದೆ. ಈ ವೇಳೆ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಏಳು ಜನ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದೆ. ಅಲ್ಲದೇ ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದೆ.
Advertisement
Advertisement
ಈ ವೇಳೆ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ ಅವರು ಗಾಯಾಳುಗಳ ಆರೋಗ್ಯ ಸುಧಾರಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಗಲಭೆ ನಡೆದ ಸ್ಥಳಕ್ಕೆ ತಂಡ ಭೇಟಿ ನೀಡಿದ್ದು, ಸಂತ್ರಸ್ಥರ ಮನೆಗಳಿಲ್ಲಿ ಪರಿಸ್ಥಿತಿ ಅವಲೋಕಿಸಿದೆ.
ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಹಲವು ಮನೆಗಳಿಗೆ ಹಾನಿಯಾಗಿತ್ತು. ಈ ವೇಳೆ ಪೊಲೀಸರ ಮೇಲೂ ಹಲ್ಲೆಗಳಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿದ್ದು ಜನಜೀವನ ಮೊದಲಿನ ಸ್ಥಿತಿಗೆ ಬಂದಿದೆ. ಇದನ್ನೂ ಓದಿ: ನಾವು ಸಾಬ್ರು ಗೊತ್ತಲ್ಲ; ಒಂದಾ ನಾವು, ಇಲ್ಲಾ ಅವ್ರು ಸಾಯ್ಬೇಕು- ಪೊಲೀಸ್ರ ಮುಂದೆ ಅವಾಜ್ ಹಾಕಿದ್ದವ ಅರೆಸ್ಟ್
Web Stories