ಕೋಲಾರ: ಬಿಜೆಪಿಯ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ತೆರಳುತ್ತಿದ್ದ ಕಾರ್, ಬೈಕ್ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರದಿಂದ ಚಿಂತಾಮಣಿ ಮುಖ್ಯ ರಸ್ತೆಗೆ ತೆರಳುತ್ತಿದ್ದ ವೇಳೆ ಪಾತಪಲ್ಲಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾದ ರಭಸಕ್ಕೆ ಬೈಕ್ನಲ್ಲಿದ್ದ ಪಾತಪಲ್ಲಿ ಗ್ರಾಮದ ರಾಜಣ್ಣ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿರುವ ಡಾಕ್ಟರ್ ವೇಣುಗೋಪಾಲ್ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯ ಬಿಜೆಪಿಯ ಅಧಿಕೃತ ಅಭ್ಯರ್ಥಿ ಆಗಿದ್ದರು. ಅಪಘಾತಕ್ಕೆ ಜಿಲ್ಲಾಧ್ಯಕ್ಷರ ಕಾರ್ ಅತಿ ವೇಗವಾಗಿ ಚಲಾಯಿಸುತ್ತಿದ್ದಿದ್ದೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರೀಲ್ಸ್ ಮಾಡಲು ಮಹಿಳೆಯ ಕತ್ತು ಸೀಳಿ ಮೊಬೈಲ್ ಕದ್ದ ಅಪ್ರಾಪ್ತ