ಬೆಳಗಾವಿ: ಬಿಜೆಪಿ ಬೆಳಗಾವಿ ಜಿಲ್ಲೆಯ ಮೂವರು ನಾಯಕರನ್ನು ತಮ್ಮ ಪಕ್ಷದಿಂದ ಉಚ್ಛಾಟನೆ ಮಾಡಿದೆ.
ಬೆಳಗಾವಿ ಜಿಲ್ಲೆಯ ಮಾಜಿ ಎಂಇಎಸ್ ಲೀಡರ್ ಶಿವಾಜಿ ಸುಂಠಕರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಎಂಇಎಸ್ ಬಿಟ್ಟು ಬಿಜೆಪಿ ಸೇರಿದ್ದ ಮಾಜಿ ಮೇಯರ್ ಶಿವಾಜಿ ಸುಂಠಕರ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಮಹಾನಗರ ಅಧ್ಯಕ್ಷ ಶಶಿಕಾಂತ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
Advertisement
Advertisement
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ 47ರಲ್ಲಿ ಬಂಡಾಯ ಅಭ್ಯರ್ಥಿಯಾಗಿ ಶಿವಾಜಿ ಸುಂಠಕರ್ ಅವರ ಪತ್ನಿ ಸುಲೋಚನಾ ಸುಂಠಕರ್ ಸ್ಪರ್ಧೆ ಮಾಡಿರುವ ಹಿನ್ನೆಲೆ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸೂಚನೆ ಮೇರೆಗೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ
Advertisement
Advertisement
ಅದೇ ರೀತಿ ವಾರ್ಡ್ 46ರಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಸುರೇಶ್ ಯಾದವ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಮೊದಲು ಏಳು ಜನರನ್ನು ಉಚ್ಛಾಟನೆ ಮಾಡಿದ್ದ ಬಿಜೆಪಿ ಇದೀಗ ಮೂವರನ್ನು ಮಾಡುವ ಮೂಲಕ ಒಟ್ಟು 10 ಮಂದಿಯನ್ನು ಉಚ್ಛಾಟನೆ ಮಾಡಿದಂತೆ ಆಗಿದೆ.ಇದನ್ನೂ ಓದಿ:ವಿಜಯಪುರ ವಿಮಾನ ನಿಲ್ದಾಣಕ್ಕೆ 125 ಕೋಟಿ: ಗೋವಿಂದ ಕಾರಜೋಳ