ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ನಗರದಲ್ಲಿ ಕೆಲ ಬಿಜೆಪಿ (BJP) ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಮಾಜಿ ಪಾಲಿಕೆ ಸದಸ್ಯ ಉಮೇಶ ವಂದಾಲ ನೇತೃತ್ವದಲ್ಲಿ ಸಂಭ್ರಮೋತ್ಸವ ಮಾಡಿದ್ದಾರೆ. ನಗರದ ಶಾಹುನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮ ಆಚರಿಸಿದರು. ಇದನ್ನೂ ಓದಿ: ಬಿಜೆಪಿ ಬಣ ಬಡಿದಾಟಕ್ಕೆ ಹೈಕಮಾಂಡ್ ಬ್ರೇಕ್ – ಯತ್ನಾಳ್ ಉಚ್ಛಾಟನೆ, ಮುಂದೇನು?
ಯತ್ನಾಳ್ ಉಚ್ಚಾಟನೆಯಿಂದ ಪಕ್ಷಕ್ಕೆ ರಾಜ್ಯದಲ್ಲಿ ಹಿಡಿದಿದ್ದ ಗ್ರಹಣ ಬಿಟ್ಟಂತಾಗಿದೆ ಎಂದು ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.