ಬೆಂಗಳೂರು: ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ (Sathish Kadathanamale) ಅವರನ್ನು ಭಾರತೀಯ ಜನತಾ ಪಾರ್ಟಿ (BJP) ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.
ಪಕ್ಷ ವಿರೋಧಿ ಚಟುವಟಿಕೆ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಅವರು ಉಚ್ಚಾಟಿಸಿ ಆದೇಶ ಪ್ರಕಟಿಸಿದ್ದಾರೆ.
ಉಚ್ಚಾಟಿಸಿದ್ದು ಯಾಕೆ?
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ (SR Vishwanath) ಸೇರಿದಂತೆ ಸ್ಥಳೀಯ ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಸತೀಶ್ ಕಡತನಮಲೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಪದೇಪದೇ ಸುದ್ದಿಗೋಷ್ಠಿಗಳನ್ನು ನಡೆಸುವ ಮೂಲಕ ಮಾಧ್ಯಮಗಳ ಮುಂದೆ ಪಕ್ಷ ಮತ್ತು ನಾಯಕರ ವಿರುದ್ಧ ಹೇಳಿಕೆ ನೀಡಿ ಮುಜುಗರ ಉಂಟುಮಾಡಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ – ಕೋಮು ಗಲಭೆ ʼಕೇಸ್ ವಾಪಸಿʼಗೆ ಹೈಕೋರ್ಟ್ ತಡೆ
ಸತೀಶ್ ಕಡತನಮಲೆ ಅವರು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಅತ್ಯಂತ ಆಪ್ತರಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಇದು ಸ್ಥಳೀಯ ಬಿಜೆಪಿ ನಾಯಕರ ಕೆಣ್ಣಿಗೆ ಗುರಿಯಾಗಿತ್ತು. ಇದನ್ನೂ ಓದಿ: ಆರ್‌ಎಸ್‌ಎಸ್ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ
