ಬೆಂಗಳೂರು: ಬಿಜೆಪಿ ಸತ್ಯಶೋಧನಾ ಸಮಿತಿಯು (BJP Fact Finding Committee) ನಾಳೆ (ಸೋಮವಾರ) ನಾಗಮಂಗಲಕ್ಕೆ (Nagamangala) ಭೇಟಿ ಕೊಟ್ಟು ಅಲ್ಲಿನ ಮಾಹಿತಿಯನ್ನು ಪಡೆಯಲಿದೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ (CN Ashwath Narayan) ತಿಳಿಸಿದರು.
ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನನ್ನ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಮಾಜಿ ಸಚಿವರು ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮೀ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಸಮಿತಿ ಒಳಗೊಂಡಿದೆ ಎಂದರು. ಇದನ್ನೂ ಓದಿ: ಪಂಚ ಗ್ಯಾರಂಟಿಗಳನ್ನು ವಿರೋಧಿಸುವವರು ವಿಚ್ಛಿದ್ರಕಾರಿ ಶಕ್ತಿಗಳು: ಸಿಎಂ
Advertisement
Advertisement
ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಪ್ರಾರಂಭದಲ್ಲಿ ಅದೇನೂ ಇಲ್ಲ ಎಂಬಂತೆ ಹೇಳಿಕೆ ಕೊಟ್ಟರು. ನಂತರ ಇಂಟೆಲಿಜೆನ್ಸ್ ಮುಖ್ಯಸ್ಥರನ್ನು ವರ್ಗಾಯಿಸಿದರು. ಇನ್‌ಸ್ಪೆಕ್ಟರ್ ಅನ್ನು ಅಮಾನತು ಮಾಡಿದ್ದು, ಕಾನೂನು- ಸುವ್ಯವಸ್ಥೆ ನಿರ್ವಹಿಸುವಲ್ಲಿನ ವೈಫಲ್ಯವು ನಾಗಮಂಗಲ ಘಟನೆ ಮೂಲಕ ವ್ಯಕ್ತವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನ್ಯಾಯ ಸಿಕ್ಕರೆ ಚಹಾ ಸ್ವೀಕಾರ: ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಒತ್ತಾಯ
Advertisement
ಕೇರಳದವರು ಇದರ ಹಿಂದಿದ್ದು, ಎಸ್‌ಡಿಪಿಐನವರು ಇದ್ದಾರೆ ಎಂಬ ಅನುಮಾನಗಳಿವೆ. ನಾಗಮಂಗಲದಲ್ಲಿ ಒಂದು ಕೋಮಿನವರು ಪ್ರಚೋದನೆ ಮಾಡಿದ್ದಾರೆ. ನಮ್ಮ ಸಂಸ್ಕೃತಿ ಎನಿಸಿದ ವಿನಾಯಕನ ಚತುರ್ಥಿ ಕಾರ್ಯಕ್ರಮವು ದೇಶದ ಸದೃಢತೆಗೆ ಶಕ್ತಿ ತುಂಬುತ್ತದೆ. ಅಂಥ ಸಂದರ್ಭದಲ್ಲಿ ಅಡಚಣೆ, ಅನಾವಶ್ಯಕವಾಗಿ ತೊಂದರೆ ಕೊಡುತ್ತಿದ್ದು, ಇದಕ್ಕೆ ಗೃಹ ಇಲಾಖೆ ಬೆಂಬಲ ಕೊಡುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಮದುವೆ ಮಂಟಪದಿಂದ ನೇರವಾಗಿ ಬಂದು ನವಜೋಡಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿ
Advertisement
ಈ ಸರ್ಕಾರ ಒಂದು ವರ್ಗ, ಒಂದು ಧರ್ಮಕ್ಕೆ ಸೀಮಿತವಾಗಿ ವರ್ತಿಸುತ್ತಿದೆ. ಎಷ್ಟೋ ಕಡೆ ಗಣೇಶ ಮೂರ್ತಿ ಇಡಲು ಬಿಟ್ಟಿಲ್ಲ. ಮೆರವಣಿಗೆಗೆ ಕಡಿವಾಣ ಹಾಕಿದ್ದಾರೆ. ಫ್ರೀಡಂ ಪಾರ್ಕಿನಲ್ಲಿ ಗಣೇಶ ಮೂರ್ತಿಯನ್ನೇ ಅರೆಸ್ಟ್ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ನಾಗಮಂಗಲದಲ್ಲಿ ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ: ಎನ್ ರವಿಕುಮಾರ್
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು ಸಂಪೂರ್ಣವಾಗಿ ವಿಫಲವಾಗಿದೆ. ನೂರಾರು ಘಟನೆಗಳು ಕಣ್ಣೆದುರು ಇವೆ. ತುಷ್ಟೀಕರಣದ ಪರಿಣಾಮ, ಆಡಳಿತದ ಮೇಲೆ ಹಿಡಿತ, ಸ್ಪಷ್ಟತೆ ಇಲ್ಲದ ಕಾರಣ ಸಮಾಜದಲ್ಲಿ ತುಂಬ ಗೊಂದಲ, ಭಯ, ಅತೃಪ್ತಿಯ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಮಾನವ ಸರಪಳಿ: ಗಡಿ ಜಿಲ್ಲೆಯಲ್ಲಿ 1 ಕಿಮೀ ಧ್ವಜ, ವಿವಿಧತೆಯಲ್ಲಿ ಏಕತೆಯ ಪ್ರತಿಬಿಂಬ ಅನಾವರಣ