ಕೋಲ್ಕತ್ತಾ: ನಂದಿಗ್ರಾಮ ಉಪಚುನಾವಣೆಗೆ (Nandigram Bypoll) ಹತ್ಯೆಯಾದ ಆಪ್ತ ಸಹಾಯಕನ ತಾಯಿಗೆ ಸಿಎಂ ಸುವೇಂದು ಅಧಿಕಾರಿ (Suvendu Adhikari) ಟಿಕೆಟ್ ನೀಡಿದ್ದಾರೆ.
ಆಪ್ತ ಸಹಾಯಕ ಚಂದ್ರನಾಥ್ ರಾಥ್ ಅವರ ತಾಯಿ ಹನ್ಸಿರಾನಿ ರಾಥ್ ಅವರನ್ನು ಭಾರತೀಯ ಜನತಾ ಪಕ್ಷವು ಮಂಗಳವಾರ ಕಣಕ್ಕಿಳಿಸಿದೆ. ಸುವೇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಎರಡು ದಿನಗಳ ಮೊದಲು, ಪಶ್ಚಿಮ ಬಂಗಾಳದ ಮಧ್ಯಮಗ್ರಾಮ್‌ನಲ್ಲಿ ಚಂದ್ರನಾಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ರಾಜಸ್ಥಾನ ಚುನಾವಣೆ| ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ – ಮೋದಿ ಅಭಿನಂದನೆ
ಅದಾದ ಸ್ವಲ್ಪ ದಿನದಲ್ಲೇ ಸುವೇಂದು ಆ ಕುಟುಂಬವನ್ನು ಭೇಟಿ ಮಾಡಿ, ಅವರ ಮನೆಯ ರಕ್ಷಕನಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಹನ್ಸಿರಾನಿ ಅವರು ಪಂಚಾಯತ್ ಮತ್ತು ಪಂಚಾಯತ್ ಸಮಿತಿ ಚುನಾವಣೆಗಳಲ್ಲಿ ಐದು ಬಾರಿ ಗೆಲುವು ಸಾಧಿಸಿದವರೂ ಆಗಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸುವೇಂಧು ಅಧಿಕಾರಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಆ ಪೈಕಿ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ಕ್ಷೇತ್ರವನ್ನು ಕೈಬಿಟ್ಟು, ಭವಾನಿಪುರ ಕ್ಷೇತ್ರವನ್ನು ಉಳಿಸಿಕೊಂಡರು. ಇದನ್ನೂ ಓದಿ: ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ – ಬುಡಕಟ್ಟು ಪ್ರದೇಶಗಳಲ್ಲೂ ಜಯಭೇರಿ

