ಬೆಂಗಳೂರು: ಕುತೂಹಲ ಕೆರಳಿಸಿ ಸುದ್ದಿಯಾಗಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಕಣಕ್ಕೆ ಇಳಿಯಲಿದ್ದಾರೆ.
ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಮತ್ತು ತೇಜಸ್ವಿ ಸೂರ್ಯ ಮಧ್ಯೆ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆಯ ಮಧ್ಯೆ ಬಿಜೆಪಿ ಹೈಕಮಾಂಡ್ ರವಿಸುಬ್ರಹ್ಮಣ್ಯ ಅವರಿಗೆ ಟಿಕೆಟ್ ನೀಡಲು ಮುಂದಾಗಿತ್ತು. ಆದರೆ ರವಿ ಸುಬ್ರಹ್ಮಣ್ಯ ಟಿಕೆಟ್ ಆಫರ್ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಅಣ್ಣನ ಮಗನಾದ ತೇಜಸ್ವಿ ಸೂರ್ಯ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ.
Advertisement
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಬಳಿಕ ಈ ಕ್ಷೇತ್ರವನ್ನು ಅವರ ಪತ್ನಿ ತೇಜಸ್ವಿನಿ ಅವರಿಗೆ ನೀಡಲು ಪಕ್ಷದ ಮುಖಂಡರು ಮುಂದಾಗಿದ್ದರು. ಈ ಸಂಬಂಧ ದಕ್ಷಿಣ ಭಾಗದ ಬಿಜೆಪಿ ಶಾಸಕರು, ಮುಖಂಡರ ಸಭೆ ನಡೆಸಿದ ಬಳಿಕ ರಾಜ್ಯ ನಾಯಕರು ಹೈಕಮಾಂಡಿಗೆ ತೇಜಸ್ವಿನಿ ಅವರ ಹೆಸರನ್ನು ಶಿಫಾರಸು ಮಾಡಿದ್ದರು.
Advertisement
Advertisement
ಅನಂತ್ ಕುಮಾರ್ ಅವರ ಸತತ ಜಯದಿಂದ ಬಿಜೆಪಿಯ ಭದ್ರಕೋಟೆ ಆಗಿರುವ ಈ ಕ್ಷೇತ್ರದಲ್ಲಿ ಸುಲಭವಾಗಿಯೇ ಅಭ್ಯರ್ಥಿ ಆಯ್ಕೆಯನ್ನು ಬಿಜೆಪಿ ಮಾಡುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಈ ಮಧ್ಯೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ತೇಜಸ್ವಿನಿ ಅವರಿಗೆ ಟಿಕೆಟ್ ನೀಡಲು ಆರ್‍ಎಸ್‍ಎಸ್ ಆಕ್ಷೇಪ ವ್ಯಕ್ತಪಡಿಸುತ್ತದೆ. ಹೀಗಾಗಿ ಪಕ್ಷದ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿಸೂರ್ಯ ಅವರನ್ನು ಕಣಕ್ಕೆ ಇಳಿಸಬಹುದು ಎಂದು ಹೈಕಮಾಂಡ್ ಮಟ್ಟದವರಿಗೆ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಪರಿಗಣಿಸಿದ ಹೈಕಮಾಂಡ್ ಈಗ ತೇಜಸ್ವಿನಿ ಅವರನ್ನು ಇಳಿಸಬೇಕೋ ಅಥವಾ ತೇಜಸ್ವಿ ಸೂರ್ಯ ಅವರನ್ನು ಇಳಿಸಬೇಕೋ ಎನ್ನುವ ಗೊಂದಲದಲ್ಲಿತ್ತು. ಕೊನೆಗೆ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ಸಿಕ್ಕಿದ್ದು, ಮೂಲಕ ಬಿಎಲ್ ಸಂತೋಷ್ ಗೆದ್ದಿದ್ದಾರೆ.
Advertisement
ಜಯನಗರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹಾಲಿ ಶಾಸಕರಾಗಿದ್ದ ವಿಜಯ್ ಕುಮಾರ್ ಅವರು ಮೃತಪಟ್ಟಿದ್ದರು. ಹೀಗಾಗಿ ನಂತರ ನಡೆದ ಚುನಾವಣೆಯಲ್ಲಿ ವಿಜಯ್ ಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಬಿಜೆಪಿ ಕಣಕ್ಕೆ ಇಳಿಸಿತ್ತು. ಅನುಕಂಪದ ಅಲೆಯಲ್ಲಿ ಪ್ರಹ್ಲಾದ್ ಬಾಬು ಅವರಿಗೆ ಜಯ ಸಿಗಬಹುದು ಎಂದು ಎಣಿಸಿ ಟಿಕೆಟ್ ನೀಡಿದ್ದರೂ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸೌಮ್ಯಾ ರೆಡ್ಡಿ ಜಯಗಳಿಸಿದ್ದರು. ಹೀಗಾಗಿ ಯಾವಾಗಲೂ ಅನುಕಂಪ ಕೆಲಸ ಮಾಡುವುದಿಲ್ಲ. ಪಕ್ಷ ಸಂಘಟನೆಯ ದೃಷ್ಟಿಯಿಂದಾಗಿ ಕ್ಷೇತ್ರದಲ್ಲಿ ಗಟ್ಟಿ ಅಭ್ಯರ್ಥಿಯನ್ನು ಹಾಕಬೇಕು ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆದು ಹೈಕಮಾಂಡ್ ತೇಜಸ್ವಿನಿ ಅವರಿಗೆ ಟಿಕೆಟ್ ನಿರಾಕರಿಸಿದೆ ಎನ್ನಲಾಗಿದೆ.
I can't thank enough RSS and its selfless leaders for showering their choicest blessings on me. You have excused my mistakes, tolerated my mischief, supported me in every possible way. I can't believe that men like @MUKUNDAckpura & @blsanthosh exist in real. I want to be like you
— Tejasvi Surya (@Tejasvi_Surya) March 25, 2019
ಯಾರು ತೇಜಸ್ವಿ ಸೂರ್ಯ?
ಕಾನೂನು ಪದವಿ ಓದಿರುವ ತೇಜಸ್ವಿ ಸೂರ್ಯ, ಪ್ರಸ್ತುತ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಾಮಾಜಿಕ ಜಾಲತಾಣದ ಸದಸ್ಯರಾಗಿರುವ ಇವರು ಶಾಸಕ ರವಿ ಸುಬ್ರಮಣ್ಯ ಅವರ ಅಣ್ಣನ ಮಗ. ಆರ್ಎಸ್‍ಎಸ್‍ನ ಮೂಲಕ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ಇವರು 4 ವರ್ಷಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಾಧ್ಯಮಗಳ ಚರ್ಚಾ ಕಾರ್ಯಕ್ರಮದಲ್ಲಿ ಪಕ್ಷದ ಪರವಾಗಿ ಭಾಗವಹಿಸುತ್ತಿರುವ ಇವರು ಉತ್ತಮ ಭಾಷಣಕಾರರಾಗಿದ್ದಾರೆ.