ಬೆಂಗಳೂರು: ವೋಟರ್ ಡೇಟಾ (Voter Data) ಹಗರಣ ನಡೆದಿದೆ ಎಂದು ಕಾಂಗ್ರೆಸ್ (Congress) ಮಾಡಿದ್ದ ಆರೋಪವನ್ನು ಅಲ್ಲಗಳೆದಿರುವ ಬಿಜೆಪಿ (BJP), ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದೆ.
ಕಾಂಗ್ರೆಸ್ ಆರೋಪಗಳು ದುರುದ್ದೇಶಪೂರಿತವಾಗಿವೆ. ಚುನಾವಣಾ ಆಯೋಗವು 2013 ರಿಂದಲೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಚುನಾವಣಾಧಿಕಾರಿಗೆ ಬಿಜೆಪಿ ಮನವಿ ಮಾಡಿದೆ. ಇದನ್ನೂ ಓದಿ: ವೋಟರ್ ಡೇಟಾ ಹಗರಣ ಆರೋಪ- ಸರ್ಕಾರಕ್ಕೆ ಸಿದ್ದರಾಮಯ್ಯ ವಾರ್ನಿಂಗ್
ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟಿದ್ದು ಕಾಂಗ್ರೆಸ್. 2017-18ರಲ್ಲಿ ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ಅವಧಿಯಲ್ಲಿ ಅನುಮತಿ ಕೊಡಲಾಗಿತ್ತು. ಪ್ರಕರಣವನ್ನು ಕಾಂಗ್ರೆಸ್ ದಿಕ್ಕು ತಪ್ಪಿಸುತ್ತಿದೆ. ಏನೇ ಲೋಪ ನಡೆದಿದ್ದರೂ, ಆಯೋಗದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಬಿಜೆಪಿ ಒತ್ತಾಯಿಸಿದೆ.
ವೋಟರ್ ಡೇಟಾ ಹಗರಣ ನಡೆಸಲಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಬಿಬಿಎಂಪಿ ಅಧಿಕಾರಿಗಳು ಎಂದು ಹೇಳಿಕೊಂಡು ಮತದಾರರಿಂದ ವೈಯಕ್ತಿಕ ಮಾಹಿತಿ ಪಡೆಯಲಾಗಿದೆ ಎಂದು ಆರೋಪಿಸಿತ್ತು. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ. ಇದನ್ನೂ ಓದಿ: ಬ್ಲಾಕ್ ಮನಿಯನ್ನು ವೈಟ್ ಮಾಡಿತಾ ಚಿಲುಮೆ..?- ಡಿಕೆಶಿ ಹೊಸ ಬಾಂಬ್