ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಬಿಜೆಪಿ (BJP) ನಿಯೋಗವು ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ (Thawar Chand Gehlot) ಮನವಿ ಸಲ್ಲಿಸಿದೆ.
ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಹನುಮಂತ ನಿರಾಣಿ, ಡಿ.ಎಸ್.ಅರುಣ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ.ಸಿ.ಬಿ.ಶಶಿಧರ್, ರಾಜ್ಯ ಸಹ ಸಂಚಾಲಕರಾದ ಎಂ.ಜಿ.ಭಟ್, ಹರೀಶ್.ಕೆ, ಡಾ.ರಾಘವೇಂದ್ರ ಹಾಗೂ ಶ್ರೀಮತಿ ಅಶ್ವಿನಿ ಶಂಕರ್ ಅವರ ನಿಯೋಗವು ಈ ಮನವಿ ಸಲ್ಲಿಸಿತು. ಇದನ್ನೂ ಓದಿ: ಕಾಪು ಮಾರಿಗುಡಿಗೆ ಕಂಗನಾ ರಣಾವತ್ ಭೇಟಿ
9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವು ಅವೈಜ್ಞಾನಿಕ, ಅಸಾಂವಿಧಾನಿಕ ಮಾತ್ರವಲ್ಲದೆ ಇದೊಂದು ಅನ್ಯಾಯದ ನಿರ್ಧಾರ ಎಂದು ಗಮನ ಸೆಳೆಯಲಾಯಿತು. ಅದರಿಂದ ಆಗುವ ದುಷ್ಪರಿಣಾಮಗಳ ಕುರಿತು ಗಮನಕ್ಕೆ ತರಲಾಯಿತು. ಇದನ್ನೂ ಓದಿ: ನಮ್ಮ ನಾಯಕರು ಬೆದರಿಕೆ ಹಾಕುವುದನ್ನು ನಿಲ್ಲಿಸಬೇಕು – ನಿನ್ನೆ ಸಮರ್ಥನೆ, ಇಂದು ರಮ್ಯಾ ಆಕ್ಷೇಪ
ರಾಜ್ಯ ಸರ್ಕಾರದ ಈ ಕ್ರಮವನ್ನು ತಕ್ಷಣ ಹಿಂಪಡೆದುಕೊಳ್ಳುವಂತೆ ಸೂಚಿಸಿ, ಸೂಕ್ತ ನಿರ್ಧಾರ ಕೈಗೊಂಡು ಲಕ್ಷಾಂತರ ಗ್ರಾಮೀಣ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಬೆತ್ ಮೂನಿ ಸ್ಫೋಟಕ ಬ್ಯಾಟಿಂಗ್ – ಯುಪಿ ವಿರುದ್ಧ ಗುಜರಾತ್‌ಗೆ 81 ರನ್‌ಗಳ ಭರ್ಜರಿ ಜಯ