ನವದೆಹಲಿ: ಬಿಜೆಪಿ-ಜೆಡಿಎಸ್ ಮೈತ್ರಿಯ ಭಾಗವಾಗಿ ಮಂಡ್ಯ, ಹಾಸನದ ಜೊತೆಗೆ ಕೋಲಾರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ (BJP) ಹೈಕಮಾಂಡ್ ನಿರ್ಧರಿಸಿದೆ. ಮಂಗಳವಾರ ತಡರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದ್ದಾರೆ.
ಬಾಕಿ ಉಳಿದ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಹೈಕಮಾಂಡ್ ನಾಯಕರು ರಾಜ್ಯ ನಾಯಕರ ಜೊತೆಗೆ ಸಭೆ ನಡೆಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಭಾಗಿಯಾಗಿದ್ದರು. ಇದನ್ನೂ ಓದಿ: ಟೈಂ ಪಾಸ್ ಮಾಡಲು ಕಷ್ಟ, ಅದಕ್ಕೆ ಲೋಕಸಭೆಗೆ ಸ್ಪರ್ಧೆ – ಡಾ.ಕೆ.ಸುಧಾಕರ್ ಸ್ಪರ್ಧೆ ಬಗ್ಗೆ ಎಸ್.ಅರ್.ವಿಶ್ವನಾಥ್ ಹೇಳಿದ್ದೇನು?
Advertisement
ಉತ್ತರ ಕನ್ನಡ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಕ್ಷೇತ್ರಗಳಿಗೆ ಟಿಕೆಟ್ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್‌ಗೆ (Jagdish Shettar) ಟಿಕೆಟ್ ನೀಡುವ ಬಗ್ಗೆ ಅಂತಿಮ ಚರ್ಚೆಯಾಗಿದೆ. ಚಿಕ್ಕಬಳ್ಳಾಪುರಕ್ಕೆ ಅಲೋಕ್ ವಿಶ್ವನಾಥ್ ಮತ್ತು ಡಾ.ಕೆ ಸುಧಾಕರ್ ಬಗ್ಗೆ ಚರ್ಚೆಯಾಗಿದೆ. ಉತ್ತರ ಕನ್ನಡಕ್ಕೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯನ್ನು (Anantkumar Hegde) ಬದಲಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ, ಚಕ್ರವರ್ತಿ ಸೂಲಿಬೆಲೆ ಸೇರಿ ಇತರೆ ಹೆಸರುಗಳ ಬಗ್ಗೆ ಚರ್ಚೆಯಾಗಿದೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು
Advertisement
Advertisement
ಚಿತ್ರದುರ್ಗ ಮತ್ತು ರಾಯಚೂರು ಮೀಸಲು ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮತ್ತೆ ಮುಂದೂಡಿಕೆಯಾಗಿದೆ. ಚಿತ್ರದುರ್ಗದಲ್ಲಿ ಸಚಿವ ನಾರಯಣಸ್ವಾಮಿ ಸ್ಪರ್ಧೆಗೆ ನಿರಾಕರಿಸಿದರು. ಈಗ ಅವರು ಸ್ಪರ್ಧೆಗೆ ಬಯಸಿದ್ದು, ಸ್ಥಳೀಯ ಮಟ್ಟದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ರಾಯಚೂರಿನಲ್ಲೂ ಬಿ.ವಿ ನಾಯಕ್ ಮತ್ತು ಹಾಲಿ ಸಂಸದ ರಾಜ ಅಮರೇಷ್ ನಾಯಕ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಹಿನ್ನೆಲೆ ಮತ್ತೊಮ್ಮೆ ಎರಡು ಕ್ಷೇತ್ರಗಳಿಂದ ಸರ್ವೆ ವರದಿ ತರಿಸಿಕೊಳ್ಳಲು ನಿರ್ಧರಿಸಿದೆ. ಮಾರ್ಚ್ 22ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಂತಿಮ ತಿರ್ಮಾನವಾಗಲಿದೆ. ಇದನ್ನೂ ಓದಿ: ಯುರೋಪಿನಲ್ಲಿ ಐವರ ಸಾವಿಗೆ ಕಾರಣವಾಯ್ತು ಗಿಳಿ ಜ್ವರ- ಏನಿದು ಫೀವರ್, ಲಕ್ಷಣಗಳೇನು..?
Advertisement
ಸಭೆ ಬಳಿಕ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra), ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ನಿನ್ನೆ ಸಭೆ ನಡೆದಿದೆ. 30 ನಿಮಿಷಗಳ ಕಾಲ ಬಾಕಿ ಉಳಿದಿರುವ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗಿದೆ. ಎಲ್ಲವೂ ಕೂಡ ಒಂದು ಹಂತಕ್ಕೆ ಬಂದಿದೆ. ಅಂತಿಮವಾಗಿ ಮಾ.22ಕ್ಕೆ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿ ಘೋಷಣೆಯಾಗಲಿದೆ ಎಂದರು. ಇದನ್ನೂ ಓದಿ: ಸಂಜೆ ನೆರೆ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಹತ್ಯೆ – ರಾತ್ರಿ ಯುಪಿ ಪೊಲೀಸರ ಎನ್‌ಕೌಂಟರ್‌ಗೆ ಪಾತಕಿ ಬಲಿ
ಬಿಜೆಪಿ ಆಂತರಿಕ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, ಯಾವುದೇ ಕ್ಷೇತ್ರದಲ್ಲಿ ಒಮ್ಮತದ ನಿರ್ಧಾರ ಆಗಲ್ಲ. ಆಕಾಂಕ್ಷಿಗಳ ಪಟ್ಟಿ ಬಹಳ ದೊಡ್ಡದಿದೆ. ನಿನ್ನೆ ಸಭೆಯಲ್ಲಿ ಆಗಿರುವ ಎಲ್ಲಾ ವಿಚಾರ ಬಹಿರಂಗಪಡಿಸೋಕೆ ಆಗಲ್ಲ. ಏನೇ ಚರ್ಚೆ ಆದರೂ ಸಹ ಪ್ರಧಾನಿ ನೇತೃತ್ವದ ಸಭೆಯಲ್ಲಿ ಎಲ್ಲವೂ ಫೈನಲ್ ಆಗುತ್ತದೆ. ಈಗಾಗಲೇ ಘೋಷಣೆ ಆಗಿರುವ ಅಭ್ಯರ್ಥಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈಶ್ವರಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಒಂದು ಅವಧಿಗೆ ನನ್ನನ್ನು ನೇಮಕ ಮಾಡಿದ್ದಾರೆ ಎಂದು ಭಾವಿಸುತ್ತೇನೆ. ಮಂಗಳವಾರ ಬಂಡಾಯದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಏ.19, 26ರ ಚುನಾವಣಾ ದಿನಾಂಕ ಬದಲಾಯಿಸುವಂತೆ ಆಯೋಗಕ್ಕೆ ಮುಸ್ಲಿಂ ಸಂಘಟನೆಗಳಿಂದ ಮನವಿ