ಬೆಂಗಳೂರು: ಕರ್ನಾಟಕದ ಚುನಾವಣೆಯಲ್ಲಿ ಸೋತ ಬಿಜೆಪಿ (BJP) ಆತ್ಮಾವಲೋಕನ ಸಭೆ ನಡೆಸಿ ಸೋಲಿಗೆ ಕಾರಣ ಹುಡುಕುವ ಪ್ರಯತ್ನ ನಡೆಸಿದೆ. ಸಭೆಯಲ್ಲಿ ಕಾಂಗ್ರೆಸ್‍ನ ಗ್ಯಾರಂಟಿಗಳಿಂದಲೇ ಸೋಲಾದ ಬಗ್ಗೆ ಹೆಚ್ಚಿನವರು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿಯ ಪ್ರಣಾಳಿಕೆ ಕಾಂಗ್ರೆಸ್‍ನ ಪ್ರಣಾಳಿಕೆಯಷ್ಟು ಚೆನ್ನಾಗಿರಲಿಲ್ಲ. ಕಾಂಗ್ರೆಸ್ ನಾಯಕರು ಪ್ರಚಾರದ ಕಡೆ 5 ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದರು. ನಮ್ಮ ಭರವಸೆಗಳು ಜನರನ್ನು ತಲುಪುವಲ್ಲಿ ವಿಫಲವಾಗಿದ್ದೆ ಸೋಲಿಗೆ ಪ್ರಮುಖ ಕಾರಣ ಎಂದು ನಾಯಕರು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ರಾಮಯ್ಯ ಸಾಲ ಮನ್ನಾ ಅಂದಿದ್ರು, ನಾವ್ ದುಡ್ಡು ಕಟ್ಟಲ್ಲ – ಬ್ಯಾಂಕ್ ಸಿಬ್ಬಂದಿಗೆ ಸ್ತ್ರಿಶಕ್ತಿ ಸಂಘದ ಮಹಿಳೆಯರಿಂದ ಕ್ಲಾಸ್
Advertisement
Advertisement
ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿದ ಮಾಹಿತಿ ಪ್ರಕಾರ, ಮೂಲ ಪಕ್ಷದವರಿಗೆ ಪ್ರಣಾಳಿಕೆ ರಚನೆ ಹೊಣೆ ಕೊಡ ಬೇಕಿತ್ತು ಎಂದು ಕೆಲವರು ಆಕ್ರೋಶ ಹೊರ ಹಾಕಿದ್ದಾರೆ. ಈ ಮೂಲಕ ಡಾ.ಕೆ.ಸುಧಾಕರ್ ಅವರಿಗೆ ಪ್ರಣಾಳಿಕೆ ಹೊಣೆ ನೀಡಿದ್ದಕ್ಕೆ ಕೆಲವರ ಅಸಮಧಾನ ಹೊರಹಾಕಿದ್ದಾರೆ.
Advertisement
Advertisement
ಸ್ಥಳೀಯ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ಉಸ್ತುವಾರಿ ನೀಡಿದ್ದು ಸಹ ಚುನಾವಣೆ ಸೋಲಿಗೆ ಪ್ರಮುಖ ಕಾರಣವಾಗಿದೆ. ಸ್ಥಳೀಯ ಕ್ಷೇತ್ರಗಳಲ್ಲಿ ಸಚಿವರಾಗಿದ್ದಂತವರಿಗೆ ಮೂಲ ಜಿಲ್ಲೆಗಳ ಉಸ್ತುವಾರಿ ಕೊಡಬೇಕಿತ್ತು. ಅದು ಬಿಟ್ಟು ಬೇರೆ ಯಾವುದೋ ಜಿಲ್ಲೆಗೆ ಉಸ್ತುವಾರಿ ನೀಡಲಾಗಿತ್ತು ಎಂದು ಕೆಲವರು ಬೇಸರ ಹೊರಕಾಕಿದ್ದಾರೆ.
ಬೇರೆ ಜಿಲ್ಲೆಗಳಿಗೆ ತೆರಳಿ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಗೆ ಧ್ವಜಾರೋಹಣ ಮಾಡಿ ಹೋದರೆ ಸಾಕಾಗುತ್ತದೆಯೇ? ಸ್ಥಳೀಯ ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗಳಲ್ಲಿ ಬೇರೆಡೆಯ ಸಚಿವರ ಹಿಡಿತ ಹೇಗೆ ಸಾಧ್ಯ ಆಗುತ್ತದೆ ಎಂದು ಹೈಕಮಾಂಡ್ ನಿರ್ಧಾರಕ್ಕೆ ಕೆಲವರು ಪರೋಕ್ಷ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ಕೇಸ್‍ಗೆ ಟ್ವಿಸ್ಟ್ – ಪೋಕ್ಸೋ ಕೇಸ್ ದಾಖಲಿಸಿದ್ದ ಸಂತ್ರಸ್ತೆ ಅಪ್ರಾಪ್ತೆಯಲ್ಲ