ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಕೇಂದ್ರದ 34 ಹಾಲಿ ಸಚಿವರು ಹಾಗೂ ಇತರೆ ಪ್ರಮುಖರಿಗೆ ಮಣೆ ಹಾಕಿದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಕೇಂದ್ರ ಚುನಾವಣಾ ಆಯೋಗವು ಚುನಾವಣಾ ದಿನಾಂಕ ಘೋಷಿಸುವ ಮೊದಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆ ಮೂಲಕ ಚುನಾವಣೆಗೆ ತಯಾರಿ ಆರಂಭಿಸಿದೆ. ಬಿಜೆಪಿ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದ ಪ್ರಮುಖರ ವಿವರ ಹೀಗಿದೆ. ಇದನ್ನೂ ಓದಿ: ಬಿಜೆಪಿ ಮೊದಲ ಪಟ್ಟಿಯಲ್ಲಿ ಕರ್ನಾಟಕಕ್ಕೆ ಕೊಕ್ – ಆಕಾಂಕ್ಷಿಗಳಲ್ಲಿ ನಿರಾಸೆ
Advertisement
Advertisement
ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ. ಈಗಾಗಲೇ ಎರಡು ಬಾರಿ ಕ್ಷೇತ್ರದಿಂದ ಗೆದ್ದಿರುವ ಅವರು ಈ ಬಾರಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. 2014 ರಲ್ಲಿ ಪಿಎಂ ಮೋದಿ ಅವರು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದರು. 2019 ರಲ್ಲಿ ಅವರು ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ವಿರುದ್ಧ ಜಯ ಸಾಧಿಸಿದ್ದರು.
Advertisement
ಅಮಿತ್ ಶಾ
2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರದಿಂದ ಸ್ಪರ್ಧಿಸಲಿದ್ದಾರೆ.
Advertisement
ರಾಜನಾಥ್ ಸಿಂಗ್
ಮುಂಬರುವ ಚುನಾವಣೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಕ್ನೋದಿಂದ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿ: BJP Lok Sabha Candidates: ಮೊದಲ ಪಟ್ಟಿಯಲ್ಲಿ ಯಾವ ರಾಜ್ಯಕ್ಕೆ ಎಷ್ಟು ಸೀಟು?
ಸ್ಮೃತಿ ಇರಾನಿ
2019 ರಲ್ಲಿ ಕಾಂಗ್ರೆಸ್ ಭದ್ರಕೋಟೆಯಾದ ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದರು. ಸ್ಮೃತಿ ಇರಾನಿ ಅವರಿಗೆ ಮತ್ತೊಮ್ಮೆ ಉತ್ತರ ಪ್ರದೇಶದ ಅದೇ ಕ್ಷೇತ್ರವನ್ನು ಸ್ಪರ್ಧೆಗೆ ನೀಡಲಾಗಿದೆ.
ಜ್ಯೋತಿರಾದಿತ್ಯ ಸಿಂಧಿಯಾ
ರಾಜ್ಯಸಭಾ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಧ್ಯಪ್ರದೇಶದ ಗುನಾದಿಂದ ಸ್ಪರ್ಧಿಸಲಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್
ಕಳೆದ ವರ್ಷ ಬಿಜೆಪಿಯ ಅದ್ಭುತ ಗೆಲುವಿನ ಹೊರತಾಗಿಯೂ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗದ ಶಿವರಾಜ್ ಸಿಂಗ್ ಚೌಹಾಣ್ ಅವರು ವಿದಿಶಾದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಪದಾರ್ಪಣೆ ಮಾಡುವ ಉತ್ಸಾಹದಲ್ಲಿದ್ದಾರೆ.
ಕಿರಣ್ ರಿಜಿಜು
ಪ್ರಸ್ತುತ ಭೂ ವಿಜ್ಞಾನ ಖಾತೆಯನ್ನು ಹೊಂದಿರುವ ಕಿರಣ್ ರಿಜಿಜು ಅವರು ಅರುಣಾಚಲ ಪಶ್ಚಿಮದಿಂದ ಸ್ಪರ್ಧಿಸಲಿದ್ದಾರೆ. 2019 ರಲ್ಲಿ ಬಿಜೆಪಿ 2 ನೇ ಅವಧಿಗೆ ಅಧಿಕಾರಕ್ಕೆ ಬಂದಾಗಿನಿಂದ, ರಿಜಿಜು ಕೇಂದ್ರದ ಪ್ರಮುಖ ಸಚಿವಾಲಯಗಳನ್ನು ಮುನ್ನಡೆಸಿದ್ದಾರೆ.
ರಾಜೀವ್ ಚಂದ್ರಶೇಖರ್
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಬಿಜೆಪಿಯಿಂದ ಪೈಪೋಟಿಗೆ ಇಳಿಯಲಿದ್ದಾರೆ. ಕಾಂಗ್ರೆಸ್‌ನ ಶಶಿ ತರೂರ್ ಜೊತೆ ಈ ಬಾರಿ ರಾಜೀವ್ ಚಂದ್ರಶೇಖರ್ ಪೈಪೋಟಿ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: Lok Sabha: ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ಬಿಜೆಪಿ ಟಿಕೆಟ್
ಹೇಮಾ ಮಾಲಿನಿ
ಮಥುರಾ ಕ್ಷೇತ್ರದಿಂದ ನಟಿ-ರಾಜಕಾರಣಿ ಹೇಮಾ ಮಾಲಿನಿ ಮತ್ತೆ ಕಣಕ್ಕಿಳಿದಿದ್ದಾರೆ. 2014 ಮತ್ತು 2019 ರ ಚುನಾವಣೆಗಳಲ್ಲಿ ಹಿರಿಯ ಬಾಲಿವುಡ್ ನಟಿ ಎರಡೂ ಬಾರಿ 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಪ್ರಬಲ ವಿಜಯವನ್ನು ದಾಖಲಿಸಿದ್ದರು.
ಭೂಪೇಂದ್ರ ಯಾದವ್
ಸವಾಲುಗಳನ್ನು ಎದುರಿಸುವಲ್ಲಿ ಬಿಜೆಪಿಗೆ ಧೀಮಂತರಾಗಿರುವ ಭೂಪೇಂದರ್ ಯಾದವ್ ಅವರು ಎರಡು ದಶಕಗಳ ಕಾಲ ಪಕ್ಷದ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ತಮ್ಮ ಮೊದಲ ಲೋಕಸಭೆ ಚುನಾವಣೆಗೆ ಕಾಲಿಡುತ್ತಿದ್ದಾರೆ. ಯಾದವ್ ಅವರು ರಾಜಸ್ಥಾನದ ಅಲ್ವಾರ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.