ಬೆಳಗಾವಿ (ಚಿಕ್ಕೋಡಿ): ಕುಮಾರಸ್ವಾಮಿ ನಿನ್ನ ನೂರು ಬಾರಿ ಮೈ ತೊಳೆದರೂ ನೀನು ಎಮ್ಮೆ ರೀತಿ ಇರುತ್ತೀಯಾ ಎಂದು ಬಿಜೆಪಿ ಮಾಜಿ ಶಾಸಕ ರಾಜು ಕಾಗೆ, ಸಿಎಂ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
ಅಥಣಿ ತಾಲೂಕಿನ ಕಾಗವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರು ದಿನಕ್ಕೆ 10 ಬಾರಿ ಮೇಕಪ್ ಮಾಡಿಕೊಂಡು ಕ್ಯಾಮೆರಾ ಮುಂದೆ ಬರುತ್ತಾರೆ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆ ವಿರುದ್ಧ ಕಿಡಿಕಾರಿದರು.
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಸುಂದರ, ಚಂದ ಮತ್ತು ಬೆಳ್ಳಗಿದ್ದಾರೆ. ವ್ಯಕ್ತಿಯ ಅಂದ ಚಂದದ ಬಗ್ಗೆ ಸುಮ್ಮನೆ ಯಾಕೆ ಮಾತನಾಡುತ್ತೀರಾ? ಈ ರಾಜ್ಯದ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ರಾಜ್ಯದ ಅಭಿವೃದ್ಧಿಗೆ ಗಮನ ಕೊಡಬೇಕು ಎಂದು ಕಿಡಿಕಾರಿದರು.
Advertisement
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಪತಿ ಮೃತಪಟ್ಟಾಗ ಅಳಲಿಲ್ಲ ಎಂದು ಸುಳ್ಳು ಆರೋಪ ಮಾಡುತ್ತೀರಿ. ಇದು ನಿಮಗೆ ಬೇಕಾ? ಭಾರತದ ಮಣ್ಣಿನಲ್ಲಿ ಹೆಣ್ಣು ಮಕ್ಕಳನ್ನ ಗೌರವಿಸಲಾಗುತ್ತದೆ. ನೀವು ಸುಮಲತಾ ಅಂಬರೀಶ್ ಅವರ ಬಗ್ಗೆ ಮಾತನಾಡಿದ್ದು ಸರಿಯಲ್ಲ ಎಂದು ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಗುಡುಗಿದರು.