ನವದೆಹಲಿ: ಒಂದೇ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪೊಲಿಟಿಕಲ್ ಗೇಮ್ ಪ್ಲಾನ್ ಬದಲಿಸಿಕೊಂಡಿದೆ.
ಭಾನುವಾರ ರಾತ್ರಿ ಬಿಡುಗಡೆಯಾಗಬೇಕಿದ್ದ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ತಡೆಹಿಡಿಯುವ ಮೂಲಕ ಹೊಸ ದಾಳ ಉರುಳಿಸಲು ಪ್ಲಾನ್ ಮಾಡಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
Advertisement
Advertisement
ಬಿಜೆಪಿ ತನ್ನ ಎರಡನೇ ಹಂತದ ಅಭ್ಯರ್ಥಿ ಆಯ್ಕೆಯಾಗಿ ಸಭೆ ನಡೆಸಿ ರಾತ್ರಿ 80 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಯೋಚನೆ ಮಾಡಿಕೊಂಡಿತ್ತು. ಆದರೆ ಕಾಂಗ್ರೆಸ್ ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪಟ್ಟಿ ತಡೆಹಿಡಿಯುವ ಮೂಲಕ ಬಂಡಾಯದ ಲಾಭ ಪಡೆಯಲು ಯೋಜನೆ ರೂಪಿಸಿದೆ. ಇದನ್ನೂ ಓದಿ: ಕೊನೆಗೂ ರಿಲೀಸ್ ಆಯ್ತು ಕಾಂಗ್ರೆಸ್ 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ -ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?
Advertisement
Advertisement
ಇಂದಿನ ಕಾಂಗ್ರೆಸ್ ಬೆಳವಣಿಗೆ ಆಧರಿಸಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಎಲ್ಲಾ ಅಭ್ಯರ್ಥಿಗಳನ್ನು ಅಂತಿಮ ಮಾಡುವ ಸಾಧ್ಯತೆ ಇದೆ. ಇನ್ನು ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ಚಾಣಕ್ಯ ಅಮಿತ್ ಶಾ ಇಂದು ರಾತ್ರಿ ಬೆಂಗಳೂರಿಗೆ ಬರಲಿದ್ದು, 3 ದಿನ ಇಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಆರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡದ ಕಾಂಗ್ರೆಸ್ ಹೈಕಮಾಂಡ್
ಪಕ್ಷದ ಕೆಲ ಪ್ರಮುಖ ಸಭೆಗಳಲ್ಲಿ ಭಾಗವಹಿಸಿ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಚುನಾವಣೆಗೆ ಕ್ಷಣಗಣನೆ ಶುರುವಾದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ, ಮಾಧ್ಯಮ ನಿರ್ವಹಣಾ ವಿಭಾಗ, ಮಾಧ್ಯಮ ವಕ್ತಾರರ ಜೊತೆ ಸಭೆ ನಡೆಸಿ ಮತ್ತಷ್ಟು ಬಲಿಷ್ಠವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸಲಹೆ ನೀಡಲಿದ್ದಾರೆ. ಪಕ್ಷದ ಚಟುವಟಿಕೆ ಬಳಿಕ ಹೊಸಕೋಟೆಯಲ್ಲಿ ನಡೆಯುವ ರೋಡ್ ಶೋ ಮುಗಿಸಿ ವಾಪಸ್ ದೆಹಲಿಗೆ ತೆರಳಲಿದ್ದಾರೆ.