BJP ಉದ್ಯೋಗದ ಬದಲಿಗೆ ಯುವ ಸಮೂಹಕ್ಕೆ ಡ್ರಗ್ಸ್ ಕೊಡ್ತಿದೆ: ಪ್ರಿಯಾಂಕಾ ಕಿಡಿ

Public TV
2 Min Read
Priyanka Gandhi Vadra

ಶಿಮ್ಲಾ: ಯುವ ಸಮೂಹಕ್ಕೆ ಉದ್ಯೋಗದ (Employment) ಬದಲಾಗಿ ಡ್ರಗ್ಸ್ (Drugs) ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಚುನಾವಣಾ (Himachal Pradesh Elections) ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ನಿಲುವುಗಳ ಬಗ್ಗೆ ಟೀಕಿಸಿದ್ದಾರೆ. ಬಿಜೆಪಿ (BJP) ಪರಿಕಲ್ಪನೆಯನ್ನು ಯಾರೂ ಒಪ್ಪುವುದಿಲ್ಲ. ಹಿಮಾಚಲ ಪ್ರದೇಶದ ಜನರು ತಮ್ಮ ಒಳಿತಿಗಾಗಿ ಸರ್ಕಾರವನ್ನು ಬದಲಾಯಿಸಬೇಕಿದೆ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಮದುವೆ ನಿರಾಕರಿಸಿದ್ದಕ್ಕೆ ನೆರೆಮನೆಯವನಿಂದಲೇ 14ರ ಬಾಲಕಿಯ ಕತ್ತು ಹಿಸುಕಿ ಕೊಲೆ

ಇದೇ ವೇಳೆ ಬಿಜೆಪಿ (BJP) ಉದ್ಯೋಗ ಸೃಷ್ಟಿಸುವ ಭರವಸೆಗಳ ಕುರಿತು ವಾಗ್ದಾಳಿ ನಡೆಸಿದ ಪ್ರಿಯಾಂಕಾ, ಉದ್ಯೋಗ ಹಕ್ಕನ್ನು ಬೆಂಬಲಿಸುವ ಕಾಂಗ್ರೆಸ್ ಆಡಳಿತ ರಾಜ್ಯಗಳಾದ ಛತ್ತಿಸ್‌ಗಢ (Chhattisgarh) ಹಾಗೂ ರಾಜಸ್ಥಾನವನ್ನು (Rajasthan) ಉದಾಹರಣೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಉದ್ಯೋಗಿಗಳ ವಜಾ – ಟ್ವಿಟ್ಟರ್‌ ನಡೆಯನ್ನು ಖಂಡಿಸಿದ ಕೇಂದ್ರ

Himachals Chamba

ಛತ್ತಿಸ್‌ಗಢದಲ್ಲಿ ಅತ್ಯಂತ ಕಡಿಮೆ ನಿರುದ್ಯೋಗ ಇದೆ. ಕಳೆದ 3 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಅಲ್ಲಿ 5 ಲಕ್ಷ ಉದ್ಯೋಗಗಳನ್ನು ನೀಡಿದೆ. ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ 1.3 ಲಕ್ಷ ಉದ್ಯೋಗ (Employment) ಕಲ್ಪಿಸಿದೆ. ಆದರೆ ಹಿಮಾಚಲ ಪ್ರದೇಶದಲ್ಲಿ 63 ಸಾವಿರ ಹುದ್ದೆಗಳು ಖಾಲಿಯಿದ್ದರೂ, ಬಿಜೆಪಿ ಅವುಗಳನ್ನು ಭರ್ತಿ ಮಾಡಿಲ್ಲ. ವಿದ್ಯಾವಂತ ಯುವಕರು, ಶ್ರಮಜೀವಿಗಳು ಉದ್ಯೋಗಕ್ಕಾಗಿ ಹಾತೊರೆಯುತ್ತಿದ್ದಾರೆ. ಆದರೆ ಬಿಜೆಪಿ ಉದ್ಯೋಗದ ಬದಲಿಗೆ ಡ್ರಗ್ಸ್ ನೀಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

CONGRESS 4

ಯುವ ಸಮೂಹ ಏನಾದರೂ ಕೆಲಸ ಮಾಡಿ ತಮ್ಮ-ತಮ್ಮ ಕುಟುಂಬವನ್ನು ನೋಡಿಕೊಳ್ಳಬೇಕು ಎಂದು ಬಯಸುತ್ತಿದ್ದಾರೆ. ಅವರ ಕನಸುಗಳು ಈಡೇರುತ್ತಿಲ್ಲ. ಡ್ರಗ್ಸ್ ಹಾವಳಿ ಹೆಚ್ಚಾಗಿ ದಾರಿ ತಪ್ಪುತ್ತಿದ್ದಾರೆ. ಹಾಗಾಗಿ ಹಿಮಾಚಲ ಪ್ರದೇಶದಲ್ಲಿ ಸುಮಾರು 30 ಲಕ್ಷ ಮಂದಿ ಯುವಸಮೂಹದವರು ಇದ್ದರೂ, 15 ಲಕ್ಷ ಮಂದಿ ನಿರುದ್ಯೋಗಿಗಳಾಗಿದ್ದಾರೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *