ಬೆಂಗಳೂರು: ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ, ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಪ್ರವಾಹ ಸಂತ್ರಸ್ಥರಿಗೆ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ ಎಂದು ಜೆಡಿಎಸ್ ಮತ್ತೆ ಸಿಎಂ ಹಾಗೂ ಬಿಜೆಪಿಗೆ ಟಾಂಗ್ ಕೊಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ಅತೃಪ್ತ ಶಾಸಕರನ್ನ ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡಾ ಮಾಡಿಲ್ಲ. ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ ಎಂದು ಬಿಜೆಪಿಯ ಕಾಲೆಳೆದಿದೆ. ಇದನ್ನೂ ಓದಿ: ಯಡಿಯೂರಪ್ಪ ಎಲ್ಲಿದ್ದೀಯಪ್ಪ – ಸಿಎಂಗೆ ಎಚ್‍ಡಿಕೆ ಟಾಂಗ್
ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ!
ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!#KarnatakaFloods
— Janata Dal Secular (@JanataDal_S) August 8, 2019
ಪ್ರವಾಹದಿಂದ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳು ಮುಳುಗಿ ಹೋಗಿವೆ. ಸರ್ಕಾರ ನಮ್ಮನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ರವಾನಿಸಬಹುದು ಎಂಬ ನಿರೀಕ್ಷೆಯಲ್ಲಿ ಜನರು ಸಹಾಯಕ್ಕಾಗಿ ಅಧಿಕಾರಿಗಳ ಬಳಿ ಅಂಗಲಾಚುತ್ತಿದ್ದಾರೆ. ಆದರೆ ಸರ್ಕಾರ ಇವರ ನೆರವಿಗೂ ಬಾರದೇ, ಸೇನಾ ಹೆಲಿಕಾಪ್ಟರ್ ನೆರವು ಕೂಡ ಕೇಳದೇ ಇರುವುದು ದುರದೃಷ್ಟಕರ ಎಂದು ಕಿಡಿಕಾರಿದೆ.
ಬುಧವಾರ ಸರಣಿ ಟ್ವೀಟ್ ಮಾಡಿ ಸಿಎಂ ಅವರನ್ನು ಜೆಡಿಎಸ್ ಟೀಕಿಸಿತ್ತು. ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಕರ್ನಾಟಕದಲ್ಲಿ ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿಮಂಡಲವೂ ಇಲ್ಲ. ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ, ಇದೇನಾ ನಿಮ್ಮ ಜನ ಮೆಚ್ಚಿನ ಆಡಳಿತ ಮರ್ಯಾದ ಪುರುಷೋತ್ತಮರೇ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿತ್ತು.
ನಂತರ ಎರಡನೇ ಟ್ವೀಟ್‍ನಲ್ಲಿ ಸರ್ಕಾರ ಕಾಣೆಯಾಗಿದೆ. ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ಜನ ನರಳುತ್ತಿದ್ದಾರೆ. ಇದೂವರೆಗೂ ಗಂಜಿ ಕೇಂದ್ರವನ್ನು ಸರ್ಕಾರ ಸ್ಥಾಪಿಸಿಲ್ಲ. ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಿಲ್ಲ. ಮುಖ್ಯಮಂತ್ರಿ ಇಲ್ಲ, ಮಂತ್ರಿಯೂ ಇಲ್ಲ ಎಂದು ಹೇಳುವ ಮೂಲಕ ಬಿಎಸ್‍ವೈ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.