ಯಾದಗಿರಿ: ಅಲ್ಪಸಂಖ್ಯಾತರ ಮತಗಳ ಓಲೈಕೆಗಾಗಿ ಪಕ್ಷದ ಸಿದ್ಧಾಂತಗಳನ್ನು ಗಾಳಿಗೆ ತೂರಿ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದ ಶಹಾಪುರ ಶಾಸಕ ಗುರುಪಾಟೀಲ್‍ರಿಗೆ ಬಿಜೆಪಿ ಟಿಕೆಟ್ ನೀಡಿದೆ.
ರಾಜ್ಯಾದ್ಯಂತ ಬಿಜೆಪಿ ಟಿಪ್ಪು ಜಯಂತಿಗೆ ಭಾರೀ ವಿರೋಧವನ್ನು ವ್ಯಕ್ತಪಡಿಸಿತ್ತು. ಆದ್ರೂ ಶಹಾಪುರ ಬಿಜೆಪಿ ಶಾಸಕ ಗುರುಪಾಟೀಲ್ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದರು. ಆದ್ರೆ ಇದೀಗ ಬಿಜೆಪಿ ಮತ್ತೊಮ್ಮೆ ಗುರುಪಾಟೀಲ್ ಅವರಿಗೆ ಟಿಕೆಟ್ ನೀಡಿದ್ದು, ಸ್ಥಳೀಯ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಬಿಜೆಪಿಯ ಟಿಪ್ಪು ಜಯಂತಿ ವಿರೋಧದ ಪ್ರತಿಭಟನೆ ಕೇವಲ ರಾಜಕೀಯ ಬೂಟಾಟಿಕೆ ಆಯಿತಾ? ಇದು ಚೀಪ್ ಪೊಲಿಟಿಕ್ಸ್. ಪಕ್ಷದ ವಿರೋಧದ ನಡುವೆಯೂ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದ ಗುರುಪಾಟೀಲ್ ಗೆ ಬಿಜೆಪಿ ಟಿಕೆಟ್ ನೀಡಿರುವುದು ಎಷ್ಟು ಸರಿ ಅಂತಾ ನಮೋ ಬ್ರಿಗೇಡ್‍ನ ಮಾಜಿ ಸದಸ್ಯ ನೀರಜ್ ಕಾಮತ್ ಟ್ವಿಟ್ಟರ್ ನಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಈ ಹಿಂದೆ ಹೊಸಪೇಟೆಯ ಶಾಸಕ ಆನಂದ್ ಸಿಂಗ್ ಬಿಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದಕ್ಕೆ, ರಾಜ್ಯ ನಾಯಕರೆಲ್ಲಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಂತೆಯೇ ಜಯಂತಿಯಲ್ಲಿ ಭಾಗವಹಿಸಿದ್ದಕ್ಕೆ ಉತ್ತರ ನೀಡಬೇಕೆಂದು ಬಿಜೆಪಿ ಆನಂದ್ ಸಿಂಗ್ ಅವರಿಗೆ ಶೋಕಾಸ್ ನೋಟಿಸ್ ಸಹ ಜಾರಿ ಮಾಡಿತ್ತು. ಇದನ್ನೂ ಓದಿ: ಶಾಸಕ ಆನಂದ್ ಸಿಂಗ್‍ಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್