ಗದಗ: ವಿಧಾನಸಭಾ ಚುನಾವಣೆಯ ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದು, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಗದಗ ಜಿಲ್ಲೆ ನಾಲ್ಕು ವಿಧಾನಸಭಾ ಮತಕ್ಷೇತ್ರಗಳಿದ್ದು, 3 ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದ್ದು, 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿದೆ.
Advertisement
ಗದಗದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ ಪಾಟೀಲ್ 77,699 ಮತಗಳನ್ನು ಪಡೆದು 1,850 ಮತಗಳ ಅಂತರದಿಂದ ತನ್ನ ಪ್ರತಿಸ್ಪರ್ಧಿ ಬಿಜೆಪಿಯ ಅನಿಲ್ ಮೆಣಸಿನಕಾಯಿ(75,849) ರನ್ನು ಸೋಲಿಸಿದ್ದಾರೆ.
Advertisement
Advertisement
ರೋಣ ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ 83,735 ಮತಗಳನ್ನು ಪಡೆದು 7,334 ಮತಗಳಿಂದ ಗೆದ್ದಿದ್ದಾರೆ. ಪ್ರತಿಸ್ಪರ್ಧಿ ಆದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್ ಪಾಟೀಲ್ 76,401 ಮತಗಳನ್ನು ಪಡೆದರು.
Advertisement
ನರಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಸಿ ಪಾಟೀಲ್ 73,045 ಮತಗಳನ್ನು ಪಡೆದು 7,979 ಅಂತರದಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ. ಪ್ರತಿಸ್ಪರ್ಧಿ ಆಗಿದ್ದ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್ ಯಾವಗಲ್ 65,066 ಮತಗಳನ್ನು ಪಡೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ರಾಮಣ್ಣ ಲಮಾಣಿ ಶಿರಹಟ್ಟಿಯಲ್ಲಿ 91,967 ಮತಗಳನ್ನು ಪಡೆಯುವುದರ ಮೂಲಕ 29,993 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ 61,974 ಮತಗಳಿಂದ ಸೋಲನ್ನಪ್ಪಿದ್ದಾರೆ.