ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಬಿಜೆಪಿಯವರು ಚುನಾವಣಾ ಆಯೋಗದ (Election Commission) ಮೊರೆ ಹೋಗಿದ್ದಾರೆ.
ʼಶಕ್ತಿ ವಿರುದ್ಧದ ಹೋರಾಟ ‘ ಹೇಳಿಕೆ ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರು ನವದೆಹಲಿಯಲ್ಲಿರುವ ಭಾರತೀಯ ಚುನಾವಣಾ ಆಯೋಗದ ಕಚೇರಿಗೆ ಆಗಮಿಸಿ ವಯನಾಡ್ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.
Advertisement
Advertisement
ಕಾಂಗ್ರೆಸ್ ಪಕ್ಷವು ಹಲವಾರು ಹೇಳಿಕೆಗಳನ್ನು ನೀಡಿದೆ. ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವಂತೆ ನಾವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ. ಕಾಂಗ್ರೆಸ್ ಈ ರೀತಿಯ ಸುಳ್ಳುಗಳನ್ನು ಮುಂದುವರಿಸಿವುದರ ಕುರಿತು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸದ್ಗುರು ಜಗ್ಗಿ ವಾಸುದೇವ್‌ಗೆ ಮೆದುಳಿನ ಶಸ್ತ್ರಚಿಕಿತ್ಸೆ!
Advertisement
Advertisement
ರಾಹುಲ್ ಹೇಳಿದ್ದೇನು..?: ಫೆಬ್ರವರಿ 17 ರಂದು ಮುಂಬೈನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಹಿಂದೂ ಧರ್ಮದಲ್ಲಿ ‘ಶಕ್ತಿ’ ಎಂಬ ಪದವಿದೆ. ನಾವು ಶಕ್ತಿಯ ವಿರುದ್ಧ ಹೋರಾಡುತ್ತಿದ್ದೇವೆ. ಆ ಶಕ್ತಿ ಯಾವುದು ಅನ್ನೋ ಪ್ರಶ್ನೆ ಇವಿಎಂನಲ್ಲಿದೆ. ದೇಶದ ಪ್ರತಿಯೊಂದು ಸಂಸ್ಥೆಗಳಲ್ಲಿ ಇಡಿ, ಸಿಬಿಐ, ಮತ್ತು ಆದಾಯ ತೆರಿಗೆ ಇಲಾಖೆಯಲ್ಲಿಯೂ ರಾಜನ ಆತ್ಮವಿದೆ. ಮತದಾನ ಯಂತ್ರಗಳಿಲ್ಲದೆ ಪ್ರಧಾನಿ ಮೋದಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದರು. ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯಿಂದ ತೀವ್ರ ಟೀಕೆಗಳು ಬಂದಿದ್ದವು.