Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ: ಡಿಕೆಶಿ

Public TV
Last updated: April 6, 2022 8:43 pm
Public TV
Share
8 Min Read
DK SHIVAKUMAR
SHARE

ಹಾಸನ: ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

CONGRESS PARTY 1

ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಇಡೀ ರಾಜ್ಯದಲ್ಲಿ ಜನ ಬಿಜೆಪಿ ಹಾಗೂ ದಳದಲ್ಲಿ ಗುರುತಿಸಿಕೊಂಡವರು ಕಾಂಗ್ರೆಸ್ ಸದಸ್ಯರಾಗುತ್ತಿದ್ದು, ನಮಗೆ ಆತ್ಮ ವಿಶ್ವಾಸ ಹೆಚ್ಚಿಸಿದೆ. ಪಂಚರಾಜ್ಯ ಚುನಾವಣೆಯಲ್ಲಿ ನಾವು ಪಂಜಾಬ್ ರಾಜ್ಯವನ್ನು ನಮ್ಮ ತಪ್ಪಿನಿಂದ ಸೋತಿದ್ದೇವೆ. ಬಿಜೆಪಿಯವರು ಇಲ್ಲಿಯೂ ಗೆಲ್ಲುವುದಾಗಿ ಬೀಗುತ್ತಿದ್ದಾರೆ. ಆದರೆ ಜನ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. ಚುನಾವಣೆ ಫಲಿತಾಂಶ ನಂತರವೂ 30 ಲಕ್ಷ ಸದಸ್ಯರು ನೋಂದಣಿ ಆಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಅವರೆಲ್ಲ ಸದಸ್ಯರಾಗುತ್ತಿರುವುದು ಸ್ಪಷ್ಟವಾಗಿದೆ. ಇದನ್ನೂ ಓದಿ: ಕೋಮುದ್ವೇಷ ಕಕ್ಕುವುದು, ನನ್ನ ಹೆಸರು ಎಳೆದು ತರುವುದು ಸಿಟಿ ರವಿಗೆ ಮಾನಸಿಕ ರೋಗವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ನಾವು ಹೇಳಬೇಕಾಗಿಲ್ಲ. ವಿಶ್ವನಾಥ್, ಕೆಂಪಣ್ಣ ಅವರೆಲ್ಲರೂ ಹೇಳಿದ್ದಾರೆ. ಪೆಟ್ರೋಲ್, ಡೀಸೆಲ್, ರಸಗೊಬ್ಬರದ ಬೆಲೆ ಎಲ್ಲವೂ ಏರಿಕೆ ಆಗಿದ್ದು, ಬಿಜೆಪಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಜನ ಅರ್ಥ ಮಾಡಿಕೊಂಡಿದ್ದು, ಚುನಾವಣೆ ಬರಲಿ, ಅವಕಾಶ ಸಿಗಲಿ ಎಂದು ಕಾಯುತ್ತಿದ್ದಾರೆ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದಿದ್ದರು. ಆದರೆ ರಾಗಿ, ಜೋಳ, ತೊಗರಿ ಸೇರಿದಂತೆ ಬೆಳೆಗಳಿಗೆ ಬೆಂಬಲ ಬೆಲೆ ನೀಡಿಲ್ಲ. ಬದಲಿಗೆ ಸರ್ಕಾರ ಖರೀದಿಗೆ ಮಿತಿ ಏರಿದೆ. ನಮ್ಮ ರಾಜ್ಯದವರೇ ಕೃಷಿ ಸಚಿವರಾಗಿದ್ದರೂ, ಅನ್ಯಾಯ ಮುಂದುವರಿದಿದೆ. ರೈತರು ನೆಮ್ಮದಿಯಾಗಿಲ್ಲ, ಕೈಗಾರಿಕೆಗಳಿಗೆ ಬಂಡವಾಳ ಬರುತ್ತಿಲ್ಲ. ವ್ಯಾಪಾರಸ್ಥರಿಗೂ ತೊಂದರೆ ಆಗಿದೆ. ಪ್ರತಿ ಜಿಲ್ಲೆಯಲ್ಲಿ ಕೋಮುವಾದ ಹರಡುತ್ತಿದ್ದಾರೆ. ನಿನ್ನೆ ಶಿವಮೊಗ್ಗಕ್ಕೆ ಹೋಗಿದ್ದೆ. ಯಡಿಯೂರಪ್ಪನವರು ವಿಮಾನ ನಿಲ್ದಾಣ ಮಾಡಿಸುತ್ತಿದ್ದು, ಈ ವಾತಾವರಣ ಇದ್ದರೆ ಯಾರು ಬಂಡವಾಳ ಹೂಡಲು ಬರುತ್ತಾರೆ?. ಎಲ್ಲ ಕಡೆ 144 ಸೆಕ್ಷನ್ ಹಾಕಿದರೆ ಯಾರು ವ್ಯಾಪಾರ ಮಾಡುತ್ತಾರೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ನಮ್ಮ ಮಾನವ ಸಂಪನ್ಮೂಲ ಬೇರೆ ದೇಶಗಳಿಗೆ ವಲಸೆ ಹೋಗುತ್ತಿದೆ.

BJP FLAG

ರಾಜ್ಯವನ್ನು ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದಿದ್ದಾರೆ. ರಾಜ್ಯ ಕಷ್ಟದ ಪರಿಸ್ಥಿತಿಯಲ್ಲಿದ್ದು, ರಾಜ್ಯದ ಘನತೆಯನ್ನು ನಾವು ಉಳಿಸಿಕೊಳ್ಳಬೇಕು. ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಆರೋಗ್ಯ ಸೇವೆ, ಕೃಷಿ, ಬಂಡವಾಳ ಹೂಡಿಕೆ, ಉದ್ಯೋಗಕ್ಕೆ ನಮ್ಮ ರಾಜ್ಯ ಮುಂಚೂಣಿಯಲ್ಲಿತ್ತು. ಎಲ್ಲ ವರ್ಗದ ಜನರನ್ನು ಗೌರವಿಸಿ, ಕೋಮು ಗಲಭೆ ಆಗದಂತೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬೆಂಗಳೂರು, ಮಲೆನಾಡು, ಕರಾವಳಿ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಬಯಲು ಸೀಮೆ ಕರ್ನಾಟಕಕ್ಕೆ ಪ್ರತ್ಯೇಕ ಕಾರ್ಯಕ್ರಮ ರೂಪಿಸುತ್ತೇವೆ ಎಂದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಾವು ಕೊಟ್ಟ ಭರವಸೆಯನ್ನು ಶೇ.90 ರಷ್ಟು ಈಡೇರಿಸಿದ್ದೇವೆ. ಅಲ್ಪಸಂಖ್ಯಾತ ವ್ಯಾಪಾರಿಗಳನ್ನು ನಿರ್ಬಂಧಿಸುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಬಿಜೆಪಿ ಅಜೆಂಡಾ. ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದ್ದಾರೆ. ಮೊನ್ನೆ ಹಲಾಲ್ ಕಟ್ ವಿಚಾರವಾಗಿ ದಾಳಿ ಮಾಡಿದರು. ರಾಜ್ಯದಲ್ಲಿ ಕುರಿ, ಕೋಳಿ ಸಾಕುವವರು ರೈತರು. ಇವುಗಳನ್ನು ನಿಗದಿತ ಸಮಯದಲ್ಲಿ ಕಟಾವು ಮಾಡದಿದ್ದರೆ ರೈತರಿಗೆ ಅವುಗಳ ಮೇವಿನ ಹೊರೆ ಬೀಳಲಿದೆ. ಇನ್ನು ಮಾವಿನ ವಿಚಾರ. ಕೋವಿಡ್ ಸಮಯದಲ್ಲಿ ಅಲ್ಪಸಂಖ್ಯಾತರೇ ರೈತರಿಂದ ಖರೀದಿ ಮಾಡಿದ್ದರು. ಈಗ ಅವರ ವ್ಯಾಪಾರ ನಿಷೇಧ ಮಾಡಿದರೆ ನಷ್ಟ ಆಗುವುದು ರೈತರಿಗೆ. ಆಗ ಮಾವಿನ ಬೆಲೆಯೂ ಏರಿಕೆಯಾಗುತ್ತದೆ. ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದ ರೈತರಿಗೆ ಸಹಾಯ ಮಾಡಲಿಲ್ಲ. ಆನ್‍ಲೈನ್ ಅರ್ಜಿಗೆ ಕರೆ ಕೊಟ್ಟರು. ಯಾರೂ ಕೂಡ ಅರ್ಜಿ ಹಾಕಲು ಸಾಧ್ಯವಾಗದೆ ಪರಿಹಾರ ಪಡೆಯಲಿಲ್ಲ. ಈ ಮೂಲಕ ರೈತರನ್ನು ಬದುಕಿರುವಾಗಲೇ ಸಾಯಿಸುತ್ತಿದ್ದಾರೆ. ಬಿಜೆಪಿಯವರು ಮತ ಧ್ರುವೀಕರಣ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಜನರನ್ನು ತಪ್ಪುದಾರಿಗೆ ಎಳೆಯುತ್ತಿರುವವರನ್ನು ಶಿಕ್ಷಿಸುತ್ತಿಲ್ಲ. ಇದರಿಂದ ಚುನಾವಣೆ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ಭಾವಿಸಿದ್ದಾರೆ. ಮಾವಿನ ವಿವಾದದಿಂದ ರೈತರಿಗೆ ನಷ್ಟವಾಗಲಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ ಎಂದು ಉತ್ತರಿಸಿದರು. ಇದನ್ನೂ ಓದಿ: ಶಿವಮೊಗ್ಗದ ಜನತೆ ಸಂತೃಪ್ತಿಯಿಂದ ಇರುವುದು ಡಿಕೆಶಿಗೆ ಬೇಕಿಲ್ಲ: ಕೆ.ಎಸ್.ಈಶ್ವರಪ್ಪ

ಸಿದ್ದರಾಮಯ್ಯ ಅವರ ಕಾಲದಲ್ಲಿ ಶಾದಿಭಾಗ್ಯ ತಂದು ಒಂದು ಸಮುದಾಯ ಓಲೈಸಿ ಸಮಾಜ ಒಡೆದರು ಎಂಬ ಸಿ. ಟಿ ರವಿ ಅವರ ಆರೋಪಕ್ಕೆ, ಅವರಿಗೆ ಉತ್ತರ ಕೊಡುವಷ್ಟು ದೊಡ್ಡವನಲ್ಲ. ಅವರು ಮೇಧಾವಿಗಳು. ನಾವು ನಮ್ಮ ಕಾರ್ಯಕ್ರಮ ರೂಪಿಸಿದ್ದೇವೆ. ಅವರು ಜನರಿಗೆ ಉಪಯೋಗವಾಗುವ ಕಾರ್ಯಕ್ರಮ ಮಾಡಲಿ. ಅದನ್ನು ಜನರಿಗೆ ತಲುಪಿಸಿ ನಂತರ ಮಾತನಾಡಲಿ ಎಂದು ಉತ್ತರಿಸಿದರು.

COMGRESS PARTY

ಎಲ್ಲ ಪಕ್ಷಗಳು ಒಂದೊಂದು ಸಮುದಾಯ ಓಲೈಸುತ್ತಿವೆಯೇ ಎಂಬ ಪ್ರಶ್ನೆಗೆ, ನಾನು ಯಾವಾಗಲೂ ಒಂದು ಮಾತು ಹೇಳುತ್ತಿರುತ್ತೇನೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗ ಅಧಿಕಾರಕ್ಕೆ ಬಂದಂತೆ. ನಾವು ಪುಟಾಣಿ ಮಕ್ಕಳಿಗೆ ಬಿಸಿಯೂಟ ಯೋಜನೆ ತಂದೆವು. ಹೈನುಗಾರಿಕೆ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಕೊಟ್ಟೆವು, ಪರಿಶಿಷ್ಟರ ಜನಸಂಖ್ಯೆ ಆಧಾರದ ಮೇಲೆ ಅನುದಾನ ಕೊಟ್ಟೆವು. ಯುಪಿಎ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು ಕಾಯ್ದೆ ತಂದಿತ್ತು. ಆದರೆ ಬಿಜೆಪಿ ಅವರು ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ, ಆರ್ಟಿಕಲ್ 370ಯಂತಹ ಕಾನೂನು ತರುತ್ತಿದ್ದಾರೆಯೇ ಹೊರತು, ಜನರ ಆದಾಯ ಹೆಚ್ಚಿಸಲು, ರೈತರ ಬೆಂಬಲ ಬೆಲೆಗೆ, ಇಂಧನ ಬೆಲೆ ನಿಯಂತ್ರಣ ಮಾಡಲು, ಯುವಕರಿಗೆ ಉದ್ಯೋಗ ನೀಡಲು ಯಾವುದಾರರೂ ಕಾರ್ಯಕ್ರಮ ಮಾಡಿದ್ದಾರೆಯೇ?’ ಎಂದು ಪ್ರಶ್ನಿಸಿದರು.

2002ರಲ್ಲಿ ದೇವಾಲಯ ಆವರಣದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಕಾಯ್ದೆ ತಂದಿರುವ ಬಗ್ಗೆ ಪ್ರಶ್ನೆ ಕೇಳಿದಾಗ, ‘ದೇವಾಲಯದ ಆವರಣದಲ್ಲಿ ಅನಗತ್ಯ ಸಂಘರ್ಷ ಉದ್ಭವಿಸಬಾರದು ಎಂದು ತರಲಾಗಿತ್ತು. ಆದರೆ ಅದರ ನೆಪದಲ್ಲಿ ಈಗ ಜಾತ್ರೆ, ಸಂತೆಯಲ್ಲಿ ವ್ಯಾಪಾರ ನಿಷೇಧ ಮಾಡುವುದು, ಅವರ ಹೊಟ್ಟೆ ಮೇಲೆ ಸರ್ಕಾರ ಹೊಡೆಯುತ್ತಿದೆ’ ಎಂದು ಟೀಕಿಸಿದರು. ಇದನ್ನೂ ಓದಿ: ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ: ಸಿದ್ದರಾಮಯ್ಯ

ಜೆಡಿಎಸ್ ಜಲಧಾರೆ ವಿಚಾರವಾಗಿ ಪ್ರಶ್ನೆ ಕೇಳಿದಾಗ, ಬಹಳ ಸಂತೋಷ. ಒಳ್ಳೆಯದಾಗಲಿ. ಇದರಿಂದ ನಮ್ಮ ರಾಜ್ಯದ ರೈತರಿಗೆ ಅನುಕೂಲ ಆಗಬೇಕು. ಅವರ ಜಲಧಾರೆ ಎಲ್ಲಕಡೆ ಸಾಗಲಿ. ಅವರ ಕಾರ್ಯಕ್ರಮ ಯಶಸ್ವಿಯಾಗಲಿ. ನಮ್ಮ ತಕರಾರಿಲ್ಲ ಎಂದು ಹಾರೈಸಿದರು.

CONGRESS PARTY

ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳುವ ಆಲೋಚನೆ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ನಾವು ನಮ್ಮ ಕಾಲ ಮೇಲೆ, ಸ್ವಂತ ಬಲದ ಸರ್ಕಾರ ರಚನೆ ಮಾಡುತ್ತೇವೆ. ಜನ ಕಾಂಗ್ರೆಸ್ ಸರ್ಕಾರ ಬರಬೇಕು ಎಂದು ಅಪೇಕ್ಷಿಸುತ್ತಿದ್ದಾರೆ ಎಂದರು.

ಹಾಸನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವೆಲ್ಲ ನಾಯಕರು ಸೇರ್ಪಡೆಗೆ ಅರ್ಜಿ ಹಾಕಿದ್ದಾರೆ ಎಂಬ ಪ್ರಶ್ನೆಗೆ, ನಮಗೆ ದೊಡ್ಡ ನಾಯಕರುಗಳೇ ಬರಬೇಕು ಎಂಬ ನಿರೀಕ್ಷೆ ಇಲ್ಲ. 5-10 ಮತಗಳಿಂದ 2-3 ಸಾವಿರ ಮತಗಳನ್ನು ತರುವ ಕಾರ್ಯಕರ್ತರು ಪಕ್ಷ ಸೇರಿದರೆ ಸಾಕು. ನಮ್ಮ ಪಕ್ಷ ಸೇರಲು ಸುಮಾರು ಅರ್ಜಿಗಳು ಬಂದಿವೆ. ಈ ವಿಚಾರದಲ್ಲಿ ನಾವು ಸ್ಥಳೀಯ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಪಡೆಯುತ್ತೇವೆ. ಪಕ್ಷದ ಸ್ಥಳೀಯ ಕಾರ್ಯಕರ್ತರ ಜತೆ ಅವರು ಬೆರೆಯಬೇಕು. ಈ ಅರ್ಜಿ ಸ್ವೀಕರಿಸಲು ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಇದೆ. ಯಾರೆಲ್ಲ ಅರ್ಜಿ ಹಾಕಿದ್ದಾರೆ ಎಂಬುದು ಗೌಪ್ಯವಾದ ವಿಚಾರ ಅದನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂಗಳಂತೆ ಮುಸಲ್ಮಾನರೂ ಪೌರಕಾರ್ಮಿಕರಾಗಿ ದುಡಿಯಲಿ: ಸೊಗಡು ಶಿವಣ್ಣ

ಬೆಲೆ ಏರಿಕೆ ವಿಚಾರವಾಗಿ ಸರ್ಕಾರಕ್ಕೆ ಏನು ಹೇಳುತ್ತೀರ ಎಂಬ ಪ್ರಶ್ನೆಗೆ, ನಿಮ್ಮ ಕೈಯಲ್ಲಿ ಈ ದೇಶ, ರಾಜ್ಯವನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆ ಹೆಚ್ಚಾಗಿದೆ. ನೀವು ಅಧಿಕಾರ ಬಿಟ್ಟು ವಿಶ್ರಾತಿ ತೆಗೆದುಕೊಳ್ಳಿ. ಇದು ಜನ ಆಯ್ಕೆ ಮಾಡಿದ ಸರ್ಕಾರವಿಲ್ಲ ಎಂದು ಉತ್ತರಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, ನಮ್ಮಲ್ಲಿ ಯಾವುದೇ ಬಣ ಇಲ್ಲ. ನನ್ನ ಯಾವುದೇ ಬಣ ಇಲ್ಲ. ನನ್ನದು ಕಾಂಗ್ರೆಸ್ ಬಣ ಅಷ್ಟೇ. ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಪಕ್ಷದ ಕಾರ್ಯಕರ್ತನಾಗಿದ್ದೇನೆ. ನೀವು ಬಣ ಮಾಡುತ್ತಿದ್ದೀರೋ ಅಥವಾ ಬಣ್ಣ ಹಚ್ಚುತ್ತಿದ್ದೀರೋ ಗೊತ್ತಿಲ್ಲ ಎಂದರು.

ಅಭ್ಯರ್ಥಿ ಹೆಸರನ್ನು ಮುಂಚಿತವಾಗಿ ಘೋಷಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ನಾವು ನಮ್ಮ ನಾಯಕರ ಜತೆ ಚರ್ಚಿಸಿದ್ದು, ಈ ತಿಂಗಳಲ್ಲಿ ವಿಭಾಗವಾರು ಮಟ್ಟದಲ್ಲಿ ಎಲ್ಲ ಜಿಲ್ಲಾ ನಾಯಕರನ್ನು ಕರೆಸಿ ಸಭೆ ಮಾಡುತ್ತಿದ್ದೇನೆ. ಪ್ರತಿ ವಿಧಾನಸಭಾ ಕ್ಷೇತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮ ಬಳಿ ಇರುವ ವರದಿ ಬಗ್ಗೆಯೂ ಚರ್ಚಿಸುತ್ತೇವೆ. ಅಭ್ಯರ್ಥಿ ಆಯ್ಕೆ ವೇಳೆ ಗೆಲುವೇ ಮಾನದಂಡ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಹಾಸನದಲ್ಲಿ ಚುನಾವಣೆ ಎದುರಿಸಲು ಯಾವ ರೀತಿ ತಯಾರಿ ಮಾಡಲಾಗಿದೆ ಎಂಬ ಪ್ರಶ್ನೆಗೆ, ಒಂದು ಕಾಲದಲ್ಲಿ ಸಂಸತ್ತಿನಲ್ಲಿ ವಾಜಪೇಯಿ ಹಾಗೂ ಆಡ್ವಾಣಿ ಅವರು ಮಾತ್ರ ಇದ್ದರು. ಇಂದು ಅವರು 300ಕ್ಕೂ ಹೆಚ್ಚು ಸದಸ್ಯರಿದ್ದಾರೆ. ಯಾವಾಗ ಯಾರನ್ನು ಆರಿಸಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಅವಧಿಗೂ ಮುನ್ನ ಚುನಾವಣೆ ಬರುವುದೇ ಎಂಬ ಪ್ರಶ್ನೆಗೆ, ಈ ಪ್ರಶ್ನೆ ಬಿಜೆಪಿಯವರನ್ನು ಕೇಳಿದರೆ ಉತ್ತಮ. ನಾವಂತೂ ನಾಳೆ ಚುನಾವಣೆ ಮಾಡಿದರೂ ಎದುರಿಸಲು ಸಿದ್ಧ. ಅದಕ್ಕಾಗಿಯೇ ಹಗಲು ರಾತ್ರಿ ಸಂಚರಿಸುತ್ತಿದ್ದೇವೆ ಎಂದರು.

ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು ಯಾವ ರೀತಿ ಪ್ರತಿಕ್ರಿಯೆ ಬರುತ್ತಿದೆ ಎಂಬ ಪ್ರಶ್ನೆಗೆ, ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಅರಕಲುಗೋಡು ಗಡಿಯಲ್ಲಿ ಹೆಜ್ಜೆ ಹಾಕಿದ್ದಾಗ ಜನ ತೋರಿದ ಪ್ರೀತಿಗೆ ನಿಮ್ಮ ಕ್ಯಾಮೆರಾ ಕಣ್ಣುಗಳೇ ಸಾಕ್ಷಿ ಎಂದು ಉತ್ತರಿಸಿದರು.

ಮಸೀದಿಗಳಲ್ಲಿ ಮೈಕ್ ಶಬ್ಧ ಕುರಿತ ಸರ್ಕಾರದ ಸುತ್ತೋಲೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಸುಪ್ರೀಂಕೋರ್ಟ್ ಈಗ ಮಾಡಿರುವ ಕಾನೂನಿನಂತೆ ನಡೆದುಕೊಳ್ಳಲಿ. ಮೊನ್ನೆ ಯಾರೋ ತಲೆಕೆಟ್ಟವನು ಹಲಾಲ್ ಕಟ್ ಬೇಡ, ಪ್ರಾಣಿ ತಲೆಗೆ ಹೊಡೆದು, ಮೂರ್ಚೆಗೊಳಿಸಿ ವಧೆ ಮಾಡಬೇಕು ಎಂದ. ಪೆÇಲೀಸರು ಮಾಲೀನ್ಯ ನಿಯಂತ್ರಣ ಮಾಪನ ಮಾಡುವ ಯಾವ ಸಾಧನ ಇಟ್ಟುಕೊಂಡು ಪರಿಶೀಲನೆ ನಡೆಸುತ್ತಾರೆ? ಅವೈಜ್ಞಾನಿಕ ಕಾನೂನುಗಳನ್ನೇ ಬಿಜೆಪಿ ಸರ್ಕಾರ ಮಾಡುತ್ತಿದೆ. ವಾಸ್ತವವಾಗಿ ಸಾಧ್ಯವಾಗುವ ಕಾನೂನು ಮಾಡುತ್ತಿಲ್ಲ ಎಂದು ಕಿಡಿಕಾರಿದರು.

ಚುನಾವಣೆಯಲ್ಲಿ ಯಾವ ವಿಚಾರ ಇಟ್ಟುಕೊಂಡು ಹೋಗುತ್ತೀರ ಎಂಬ ಪ್ರಶ್ನೆಗೆ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಮುಕ್ತಿ ನೀಡಿ, ರಿಚಿಟಿಚಿರಿಗೆ ಶಕ್ತಿ ತುಂಬಿ ಅವರ ಬದುಕಿನ ವಿಚಾರವಾಗಿ ಚರ್ಚೆ ಮಾಡುತ್ತೇವೆ. ಪತ್ರಿಕೆಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಒಂದೊಂದು ಹುದ್ದೆಗೆ ಒಂದೊಂದು ದರ ನಿಗದಿ ಮಾಡಿರುವ ಬಗ್ಗೆ ವರದಿ ಬಂದಿವೆ. ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರದ ಎಂದರೆ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ. ಈ 40% ಸರ್ಕಾರ ವಿಚಾರವನ್ನು ಇಟ್ಟುಕೊಂಡು ಹೋರಾಟ ಮುಂದುವರಿಸುತ್ತೇವೆ. ಸದಸ್ಯತ್ವ ನೋಂದಣಿ ಕಾರ್ಯಕ್ರಮ ಮುಗಿದ ನಂತರ ನಮ್ಮ ಕಾರ್ಯಕ್ರಮ ತಿಳಿಸುತ್ತೇವೆ ಎಂದರು.

ಇದುವರೆಗೂ ರಾಜ್ಯದಲ್ಲಿ 63 ಲಕ್ಷ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಮಾಡಲಾಗಿದೆ. ಪ್ರತಿ ಬೂತ್‍ನಲ್ಲಿ ನೋಂದಾಣಿದಾರರ ನೇಮಕ ಮಾಡಿ ಮತದಾರರ ಪಟ್ಟಿ ತೆಗೆದುಕೊಂಡು ಮನೆ ಮನೆಗೂ ಹೋಗಿ ನೋಂದಣಿ ಮಾಡಲಾಗುತ್ತಿದೆ. ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ. ನಿನ್ನೆ ಅರಸೀಕೆರೆ, ಭದ್ರಾವತಿಗೆ ಭೇಟಿ ಕೊಟ್ಟು, ಅಲ್ಲಿ ತಿಳುವಳಿಕೆ ನೀಡಿ ಬಂದಿದ್ದೇನೆ. ಇನ್ನು 9 ದಿನ ಕಾಲಾವಕಾಶ ಇದ್ದು, ಎಲ್ಲರೂ ಉತ್ಸಾಹದಿಂದ ಸದಸ್ಯತ್ವ ನೋಂದಣಿ ಮಾಡಿ, ಸುಮಾರು 70 ಲಕ್ಷ ಗಡಿ ಮುಟ್ಟುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು.

TAGGED:bjpcongressDK ShivakumarfarmersHalalYediyurappaಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿಯಡಿಯೂರಪ್ಪಹಲಾಲ್
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

Dharmasthala Files
Crime

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಬುಧವಾರ SITಯಿಂದ ತನಿಖೆ ಆರಂಭ

Public TV
By Public TV
4 minutes ago
Tumakuru Lorry Accident
Crime

ಚಾಲಕನ ನಿಯಂತ್ರಣ ತಪ್ಪಿ ಬ್ಯಾಂಗಲ್ ಸ್ಟೋರ್, ಬೇಕರಿಗೆ ನುಗ್ಗಿದ ಲಾರಿ – ಮೂವರು ಸಾವು, ಐವರಿಗೆ ಗಾಯ

Public TV
By Public TV
9 minutes ago
Cyberattack forces 158 year old UK KNP Logistics transport company to shut down 700 employees lose their jobs
Latest

ಸೈಬರ್‌ ದಾಳಿಗೆ 158 ವರ್ಷದ ಹಳೆಯ ಕಂಪನಿ ಬಂದ್‌ – 700 ಮಂದಿ ಮನೆಗೆ

Public TV
By Public TV
23 minutes ago
Koppal Girl falls intoTungabhadra canal
Districts

ಪೈಪ್ ಮೇಲಿಂದ ತುಂಗಭದ್ರಾ ಕಾಲುವೆ ದಾಟುವಾಗ ಬಾಲಕಿ ನೀರುಪಾಲು

Public TV
By Public TV
26 minutes ago
SATISH JARKIHOLI 1
Districts

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಪ್ರಕರಣದ ತನಿಖೆಯನ್ನು ರಾಜಕೀಕರಣಗೊಳಿಸಬೇಡಿ: ಸತೀಶ್ ಜಾರಕಿಹೊಳಿ

Public TV
By Public TV
50 minutes ago
Air India Flight
Latest

ದೆಹಲಿಯಲ್ಲಿ ಲ್ಯಾಂಡಿಂಗ್‌ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?